ಡಾ.ಶರಣಪ್ರಕಾಶ ಪಾಟೀಲ್ 
ರಾಜ್ಯ

ಗಿರಿಜಿಲ್ಲೆ ಅಭಿವೃದ್ಧಿಗೆ ನಾಗಲೋಟದ ವೇಗ

ಚನ್ನಬಸಯ್ಯ ಗುರುವಿನ
ಯಾದಗಿರಿ: ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ ಆಯೋಜನೆ, ಆರೋಗ್ಯ ಕ್ಷೇತ್ರದ ಬಲವರ್ಧನೆ, ರಸ್ತೆ ಅಭಿವೃದ್ಧಿ, ಪ್ರವಾಸೋದ್ಯಮ, ಶಿಕ್ಷಕರ ನೇಮಕಾತಿ ಸೇರಿ ವಿವಿಧ ವಿಷಯಗಳ ಕುರಿತು ಅಽಕಾರಿಗಳೊಂದಿಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಹಿಂದಿನ ಯುಪಿಎ ಸರ್ಕಾರದ ಅವಽಯಲ್ಲಿ ರೈತರ ಸಾಲಮನ್ನಾ ಮಾಡಲಾಗಿತ್ತು. ರಾಜ್ಯದಲ್ಲಿಯೂ ಸಿದ್ದರಾಮಯ್ಯ ಸರ್ಕಾರ ಸಾಲಮನ್ನಾ ಮಾಡಿದೆ. ಆದರೆ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಿಲ್ಲ ಎಂದು ಆರೋಪಿಸಿದರು. ರೈತರ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯದೊಂದಿಗೆ ಸಹಕರಿಸಬೇಕು. ಎಲ್ಲ ಪಕ್ಷಗಳ ಜನಪ್ರತಿನಿಽಗಳು ಒಟ್ಟಾಗಿ ಕೇಂದ್ರಕ್ಕೆ ಮನವಿ ಮಾಡಿ ರೈತರ ಸಾಲಮನ್ನಾಕ್ಕೆ ಒತ್ತಾಯಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ೧೫ ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಽಸೂಚನೆ ಹೊರಡಿಸಿ ಪ್ರಕ್ರಿಯೆ ಆರಂಭಿಸಲಾಗಿದೆ. ಅಕ್ಟೋಬರ್ ಅಂತ್ಯ ಅಥವಾ ನವೆಂಬರ್‌ನಲ್ಲಿ ಪರೀಕ್ಷೆ ನಡೆಯುವ ನಿರೀಕ್ಷೆಯಿದ್ದು, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಸುಮಾರು ೯ ಸಾವಿರ ಹುದ್ದೆಗಳ ಅವಕಾಶ ದೊರೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು. ೩೭೧(ಜೆ) ಅಡಿಯಲ್ಲಿ ಈ ಭಾಗಕ್ಕೆ ಹೆಚ್ಚುವರಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತಾವು ಸಂಪುಟ ಉಪ ಸಮಿತಿಯಲ್ಲಿ ಪ್ರಸ್ತಾಪ ಮಾಡಿದ್ದಾಗಿ ಹೇಳಿದರು. ಗುರುಮಠಕಲ್ ತಾಲೂಕಿನ ಕಡೆಚೂರ-ಬಾಡಿಯಾಳ ಕೈಗಾರಿಕೆಗಳಿಂದ ರಾಸಾಯನಿಕ ತ್ಯಾಜ್ಯ ಹಾಗೂ ನೀರು ಹೊರಬಿಡುತ್ತಿರುವ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ತನಿಖಾ ವರದಿ ಆಧರಿಸಿ ಎರಡು ಕಂಪನಿಗಳಿಗೆ ಕ್ಲೋಸರ್ ನೋಟಿಸ್ ಜನರಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು. ಶಾಸಕ ಚನ್ನಾರೆಡ್ಡಿ ಪಾಟೀಲ್, ಡಿಸಿ ರಾಹುಲ್ ಪಾಂಡ್ವೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಅನಪುರ ಇದ್ದರು.

ಯಿಮ್ಸ್ನಲ್ಲಿ ಹುದ್ದೆಗಳ ಭರ್ತಿಗೆ ಕ್ರಮ

ಯಿಮ್ಸ್ ಆಸ್ಪತ್ರೆಯಲ್ಲಿ ಎಂಆರ್‌ಐ ಯಂತ್ರ ಅಳವಡಿಕೆ ಪ್ರಕ್ರಿಯೆ ನಡೆಯುತ್ತಿದೆ. ಯಂತ್ರ ಅಳವಡಿಸಿದ ಬಳಿಕ ಅದರ ಕಾರ್ಯನಿರ್ವಹಣೆ ಪರಿಶೀಲಿಸಿ ಲೋಕಾರ್ಪಣೆ ಮಾಡಲಾಗುವುದು. ಜಿಲ್ಲಾಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ. ಮೆರಿಟ್ ಪಟ್ಟಿಯೂ ಪ್ರಕಟವಾಗಿದ್ದು, ಆಕ್ಷೇಪಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದು ಸಚಿವರು ಹೇಳಿದರು. ಸಿಟಿ ಸ್ಕ್ಯಾನ್ , ಅಲ್ಟ್ರಾಸೌಂಡ್, ಎಕ್ಸ್ರೇ ಸೇರಿ ಅಗತ್ಯ ವೈದ್ಯಕೀಯ ಸೌಲಭ್ಯ ಬಲಪಡಿಸಲಾಗುತ್ತಿದೆ. ರೇಡಿಯಾಲಜಿಸ್ಟ್ ಸೇರಿ ತಜ್ಞ ಸಿಬ್ಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಯಿಮ್ಸ್ಗೆ ಹೆಚ್ಚುವರಿ ವೈದ್ಯಕೀಯ ಸೀಟುಟ ಬೇಡಿಕೆ ಸಲ್ಲಿಸಲಾಗಿದೆ. ಸಂಬಂಧಪಟ್ಟ ಪರಿಶೀಲನಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಗತ್ಯ ಮಾನದಂಡಗಳನ್ನು ಪೂರೈಸಿದ ಬಳಿಕ ಹೆಚ್ಚುವರಿ ಪಿಜಿ ಸೀಟು ದೊರೆಯುವ ನಿರೀಕ್ಷೆ ಇದೆ ಎಂದರು.

ಪ್ರವಾಸೋದ್ಯಮ ಅಭಿವೃದ್ಧಿ

ಜಿಲ್ಲೆಯ ಸಿರವಾಳ, ಶಹಾಪುರ ಸೇರಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಇಲಾಖೆ ಹಾಗೂ ಕೆಕೆಆರ್‌ಡಿಬಿ ಸಹಭಾಗಿತ್ವದಲ್ಲಿ ಪ್ರಸ್ತಾವನೆ ರೂಪಿಸಲಾಗಿದೆ. ಸಿರವಾಳ ಸೇರಿ ಪ್ರವಾಸಿ ತಾಣಗಳಿಗೆ ಕಳೆದ ವರ್ಷ ಅನುದಾನ ನೀಡಲಾಗಿದ್ದು, ಈ ಬಾರಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಪರಿಶೀಲಿಸಲಾಗುವುದು ಎಂದು ಸಚಿವ ಡಾ.ಪಾಟೀಲ್ ಹೇಳಿದರು.