ಅರಕಲಗೂಡಿನಲ್ಲಿ ತಹಸೀಲ್ದಾರ್ ಕೆ.ಸಿ.ಸೌಮ್ಯಾ ಹಾಗೂ ಪಪಂ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್ 5ನೇ ವಾರ್ಡ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಎಲ್ ಒ -2 ಮುತಾಹೀರ್ ಪಾಷಾ ಇದ್ದರು 
ರಾಜ್ಯ

ಅನರ್ಹರನ್ನು ನಿಯಮಾನುಸಾರ ಪಟ್ಟಿಯಿಂದ ಕೈಬಿಡಿ

ಪ್ರಮುಖ ಮುಖ್ಯಾಂಶಗಳು

  • ಮತದಾರರ ಸಮಗ್ರ ಪಟ್ಟಿ ವಿಶೇಷ ಪರಿಷ್ಕರಣೆ
  • ತಹಸೀಲ್ದಾರ್ ಕೆ.ಸಿ. ಸೌಮ್ಯಾ ಹಾಗೂ ಪಪಂ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್
ಅರಕಲಗೂಡು: ಮತದಾರರ ಸಮಗ್ರ ಪಟ್ಟಿ ವಿಶೇಷ ಪರಿಷ್ಕರಣೆ-2026ರ ಅಂಗವಾಗಿ ಮಂಗಳವಾರ ತಹಸೀಲ್ದಾರ್ ಕೆ.ಸಿ. ಸೌಮ್ಯಾ ಹಾಗೂ ಪಪಂ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್ ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸುವುದರೊಂದಿಗೆ ಪರಿಶೀಲನೆ ನಡೆಸಿದರು.
ಮತದಾರರ ಪಟ್ಟಿಯಲ್ಲಿರುವ ಹೆಸರು, ಹೊಸ ಮತದಾರರ ನೋಂದಣಿ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ವಿವರಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದು ಪರಿಶೀಲಿಸಿದರು. ಮತದಾರರ ಪಟ್ಟಿಯಲ್ಲಿ ಯಾವುದೇ ಅರ್ಹ ಮತದಾರರು ಹೆಸರು ಸೇರ್ಪಡೆಯಾಗದೆ ಉಳಿಯದಂತೆ ಹಾಗೂ ಅನರ್ಹ ಹೆಸರನ್ನು ನಿಯಮಾನುಸಾರ ಕೈಬಿಡುವಂತೆ ಸಂಬಂಧಪಟ್ಟ ಸಿಬ್ಬಂದಿಗೆ ಸೂಚನೆ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪಾರದರ್ಶಕ ಹಾಗೂ ನಿಖರವಾಗಿ ನಡೆಸಬೇಕು. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ನಿಗದಿತ ನಮೂನೆಗಳ ಮೂಲಕ ತಿದ್ದುಪಡಿ ಅಥವಾ ಸೇರ್ಪಡೆಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು.
ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಇದ್ದರು.
.