ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. 
ರಾಜ್ಯ

ರಾಷ್ಡ್ರೀಯ ಹೆದ್ದಾರಿ ದುರಸ್ತಿ ಮಾಡಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ರಾಜಾ ವೇಣುಗೋಪಾಲ ನಾಯಕ ಆಗ್ರಹ
  • ಲೋಕೋಪಯೋಗಿ ಸಚಿವರಿಗೆ ಮನವಿ
ಸುರಪುರ:

ಸಂಪೂರ್ಣ ಹದಗೆಟ್ಟಿರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಕೂಡಲೇ ದುರಸ್ತಿ ಕಾಮಗಾರಿ ಆರಂಭಿಸುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಮಾಡಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಾಯಕ, ಈ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಕೂಡಲೇ ದುರಸ್ತಿ ಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದರು.
ರಸ್ತೆ ಹಾಳಾಗಿದ್ದರಿಂದ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ದುರಸ್ತಿ ಕಾಮಗಾರಿ ಕೂಡಲೇ ಆರಂಭಿಸಬೇಕು ಎಂದರು.
ಶಾಸಕರ ಮನವಿಗೆ ಸ್ಪಂದಿಸಿದ ಸಚಿವ ಜಾರಕಿಹೊಳಿ, ರಾಷ್ಟ್ರೀಯ ಹೆದ್ದಾರಿ ನಿಗಮದ ಹಿರಿಯ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಹೆದ್ದಾರಿ ದುರಸ್ತಿ ಕಾಮಗಾರಿ ವಿಳಂಬ ಮಾಡದೆ ತಕ್ಷಣ ಆರಂಭಿಸುವAತೆ ಸೂಚಿಸಿದರು.
ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಽಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದರು. ಸಚಿವರ ತ್ವರಿತ ಸ್ಪಂದನೆಯಿಂದ ಹೆದ್ದಾರಿ ದುರಸ್ತಿ ಕಾಮಗಾರಿ ಶೀಘ್ರ ಆರಂಭವಾಗುವ ನಿರೀಕ್ಷೆ ಇದೆ ಎಂದರು.