ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 
ರಾಜ್ಯ

ಎಸ್.ಎಂ. ಕೃಷ್ಣ ಪ್ರತಿಮೆಗೆ ಮನವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸ್ಮರಣಾರ್ಥ ವಿಕಾಸಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದರಾಜ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಸಿಎಂಗೆ ಬರೆದಿರುವ ಪತ್ರದಲ್ಲಿ ಎಸ್.ಎಂ.ಕೃಷ್ಣ ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ರೂಪಿಸಿದವರು. ಅವರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ವಿಕಾಸಸೌಧದ ಆವರಣದಲ್ಲಿ ಅಥವಾ ಸರ್ಕಾರ ಆಯ್ಕೆ ಮಾಡುವ ಸೂಕ್ತ ಸ್ಥಳದಲ್ಲಿ ಅವರ ಪ್ರತಿಮೆ ಸ್ಥಾಪಿಸುವುದರಿಂದ ಆದರ್ಶ ನಾಯಕರಿಗೆ ಶಾಶ್ವತ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಎಸ್.ಎಂ. ಕೃಷ್ಣ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ನೀಡುವ ಮೂಲಕ ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ಬೆಳೆಸುವಲ್ಲಿ ಅವರ ಕೊಡುಗೆ ಸ್ಮರಣೀಯವಾಗಿದೆ. ತಂತ್ರಜ್ಞಾನ, ಶಿಕ್ಷಣ, ಕೈಗಾರಿಕೆ ಹಾಗೂ ನಗರಾಭಿವೃದ್ಧಿಗೆ ನೀಡಿದ ಆದ್ಯತೆ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿತು. ಹೀಗಾಗಿ ಎಸ್.ಎಂ. ಕೃಷ್ಣ ಸ್ಮರಣಾರ್ಥ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.