ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಜಾಗೃತಿ Human rights
- ಪೊಲೀಸ್ ಉಪ ವರಿಷ್ಠಾಧಿಕಾರಿ ಮನಿಷಾ ಹೇಳಿಕೆ
ಶ್ರೀನಿವಾಸಪುರ: ಸಮಾಜದಲ್ಲಿ ಶಾಂತಿಯುತ ಸಹಬಾಳ್ವೆ ಹಾಗೂ ಸುವ್ಯವಸ್ಥೆ ಕಾಪಾಡಲು ಪೂರಕವಾಗಿ ಪ್ರತಿಯೊಬ್ಬರೂ ಮೂಲ ಹಕ್ಕುಗಳನ್ನು ಗೌರವಿಸಬೇಕು. ಮಾನವ ಹಕ್ಕುಗಳಿಗೆ ಚ್ಯುತಿ ಬಾರದಂತೆ ಎಚ್ಚರವಹಿಸಬೇಕು ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ ಮನಿಷಾ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ Huamn rights
ಜಾಗೃತಿ ಹಾಗೂ ಭ್ರಷ್ಟಾಚಾರ ನಿಮೂರ್ಲನಾ ಸಂಸ್ಥೆ, ವಿಶ್ವಮಾನವ ಡಾ.ರಾಜ್ಕುಮಾರ್ ಜನಸೇವಾ ಫೌಂಡೇಷನ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸ್ಥಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ಜನರು ಸೈಬರ್ ಅಪರಾಧದ ಬಗ್ಗೆ ಎಚ್ಚರದಿಂದಿರಬೇಕು. ಯಾರೊಂದಿಗೂ ಒಟಿಪಿ ಹಂಚಿಕೊಳ್ಳಬಾರದು. ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಯ ನೆರವು ಪಡೆಯಬೇಕು ಎಂದು ಹೇಳಿದರು.
ರಾಷ್ಟ್ರೀಯ ಮಾನವ ಹಕ್ಕುಗಳ ಜಾಗೃತಿ ಹಾಗೂ ಭ್ರಷ್ಟಾಚಾರ ನಿಮೂರ್ಲನಾ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಆರ್.ಶಿವಕುಮಾರಗೌಡ ಮಾತನಾಡಿ, ಹುಟ್ಟಿನಿಂದ ಸಾವಿನವರೆಗೆ ಮಾನವ ಹಕ್ಕುಗಳ ಪಾತ್ರ ಹಿರಿದು. ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವುದರ ಮೂಲಕ ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯ ಈಡೇರುವಂತೆ ಮಾಡಬೇಕು. ವಿದ್ಯಾರ್ಥಿಗಳು ಅನಗತ್ಯವಾಗಿ ಮೊಬೈಲ್ ಬಳಸುವುದನ್ನು ಬಿಡಬೇಕು. ವಿದ್ಯಾರ್ಜನೆಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.
ತಹಸೀಲ್ದಾರ್ ಸುಧೀಂದ್ರ ಮಾತನಾಡಿ, ಮಾನವ ಹಕ್ಕುಗಳಿಗೆ ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವವಿದೆ. ಜ್ಞಾನ ವ್ಯಕ್ತಿಯ ಸಾಮರ್ಥ್ಯ ಹೆಚ್ಚಿಸುತ್ತದೆ. ಪ್ರತಿಯೊಬ್ಬರೂ ಜ್ಞಾನಾರ್ಜನೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಉಪಪ್ರಧಾನ ಕಾನೂನು ನೆರವು ವಕೀಲ ಎಸ್.ಸತೀಶ್ ಮಾತನಾಡಿ, ಪ್ರತಿಯೊಬ್ಬರು ಸಂವಿಧಾನ ಗೌರವಿಸಬೇಕು. ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.
ವಕೀಲ ಎಂ.ನಾಗರಾಜ್, ಪ್ರಾಂಶುಪಾಲ ಪ್ರೊ.ಎಸ್.ಸಣ್ಣೀರಯ್ಯ, ಸಾಮಾಜಿಕ ಅರಣ್ಯ ಇಲಾಖೆ ಸಿಬ್ಬಂದಿ ಜಾವೀದ್, ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಮೃತ್ಯುಂಜಯ, ಚಲನಚಿತ್ರ ನಿಮಾರ್ಪಕ ಕುಮಾರ್ ಮೂರ್ತಿ, ಸಮಾಜ ಸೇವಕ ಶ್ರೀನಿವಾಸಮೂರ್ತಿ, ಸಂಘಟನೆಯ ಸದಸ್ಯರಾದ ಯಾಸೀನ್, ಡಾ.ಪುಷ್ಪಾ, ಡಾ.ಕೆ.ಶಾರದಾ, ಡಾ.ಮಂಜುನಾಥ್, ಎನ್.ಕೆ.ವಿ.ರತ್ನಮ್ಮ, ಡಾ.ಟಿ.ಶುಭವತಿ ಇದ್ದರು.