ಬೆಂಗಳೂರು: “ಈ ದೇಶದ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ಧ್ವನಿಯಾಗಿ ನಮ್ಮ ಯುವ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ದೇಶದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar) ಅವರು ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. “ಯುವ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿದರು, “ಯುವ ಕಾಂಗ್ರೆಸ್ ಅವರದ್ದು ಶ್ಲಾಘನೀಯ ಕೆಲಸ. ಇಂತಹ ಪರಿಸ್ಥಿತಿ ಏಕೆ ಬಂದಿತು ಎಂದು ಪ್ರಧಾನಿಯವರು, ಬಿಜೆಪಿ ನಾಯಕರು, ಸಂಸದರು, ಕೇಂದ್ರ ಸಚಿವರು ಮಾತನಾಡಬೇಕು. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ ಎಂದು ಪ್ರಧಾನಿ ಒಪ್ಪಿಕೊಂಡಿದ್ದಾರೆ. ಇದರಿಂದ ಉಂಟಾಗುವ ಪರಿಣಾಮವೇನು? ಅದರಿಂದ ಜನರನ್ನು ಹೇಗೆ ರಕ್ಷಣೆ ಮಾಡುತ್ತಾರೆ? ದಯವಿಟ್ಟು, ಇದಕ್ಕೆ ನಮಗೆ ಉತ್ತರ ಬೇಕು” ಎಂದು ಆಗ್ರಹಿಸಿದರು.
ಚಾಮರಾಜನಗರದಲ್ಲಿ ಕಾಲದ ಬಗೆಗಿನ ಹೇಳಿಕೆ ಬಗ್ಗೆ ಕೇಳಿದಾಗ, “ಕಾಲ ತೀರ್ಮಾನ ಮಾಡುತ್ತದೆ” ಎಂದು ಹೇಳಿದ್ದೇನೆ” ಎಂದರು.