Retired ASP K.N.Ramesh passes away
ಚಿಂತಾಮಣಿ: ನಗರದ ನಿವಾಸಿ, ನಿವೃತ್ತ ಎಎಸ್ಪಿ ಕೆ.ಎನ್.ರಮೇಶ್ (61) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ, ನಗರದ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಗಳಲ್ಲಿ ಸೇವೆ ಸಲ್ಲಿಸಿದ್ದರು. 2025 ಜೂನ್ 17ರಂದು ನಿವೃತ್ತಿಯಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹುಟ್ಟೂರಾದ ಶೃಂಗೇರಿ ತಾಲೂಕಿನ ಕಿಗ್ಗ ಗ್ರಾಮದಲ್ಲಿ ನಡೆಯಿತು.