ನಿವೃತ್ತ ಐಎಎಸ್ ಅಧಿಕಾರಿ ಜಿ.ಸತ್ಯವತಿ  
ರಾಜ್ಯ

ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜಿ.ಸತ್ಯವತಿ ನೇಮಕ | Chief Information Commissioner

ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರನ್ನಾಗಿ(Chief Information Commissioner) ನಿವೃತ್ತ ಐಎಎಸ್ ಅಧಿಕಾರಿ ಜಿ.ಸತ್ಯವತಿಯವರನ್ನು ನೇಮಕಗೊಳಿಸಿ ಶನಿವಾರ(ಮೇ 02) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ಕಳೆದ ವರ್ಷ ಜೂನ್ 30ರಂದು ನಿವೃತ್ತಿ ಹೊಂದಿದ್ದ ಜಿ. ಸತ್ಯವತಿಯವರನ್ನು ರಾಜ್ಯ ಸರ್ಕಾರ, ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸುವಂತೆ ಇತ್ತೀಚಿಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಈ ಹಿನ್ನೆಲೆ ರಾಜ್ಯಪಾಲರು ರಾಜ್ಯ ಸರ್ಕಾರದ ಶಿಫಾರಸು ಅನ್ನು ಅಂಗೀಕರಿಸಿದ್ದಾರೆ.
2004ರ ಬ್ಯಾಚ್​​ನ ಐಎಎಸ್ ಅಧಿಕಾರಿಯಾಗಿದ್ದ ಜಿ.ಸತ್ಯವತಿಯವರು, ಕೋಲಾರ, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ ಬಿಎಂಟಿಸಿಯ ಎಂಡಿ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ, ಕರ್ನಾಟಕ ಲೋಕಸೇವಾ ಆಯೋಗ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.