besom 
ರಾಜ್ಯ

ಗೃಹ ಜ್ಯೋತಿ ಯೋಜನೆ ಮರು ಪರಿಶೀಲನೆ ಚುರುಕು 68 ಲಕ್ಷ ಗ್ರಾಹಕರಲ್ಲಿ ಶೇ.50ರಷ್ಟು ಮಾಹಿತಿ ಸಂಗ್ರಹ

ಪ್ರಮುಖ ಮುಖ್ಯಾಂಶಗಳು

  • ನಗರ ಪ್ರದೇಶಗಳಲ್ಲಿನ ಅಪಾರ್ಟ್‌ಮೆಂಟ್‌ಗಳಲ್ಲಿ ಮಾಹಿತಿ ಸಂಗ್ರಹಿಸುವುದು ಸಿಬ್ಬಂದಿಗೆ ದೊಡ್ಡ ಸವಾಲು:
  • ಪರಿಶೀಲನಾ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲು ಎಸ್ಕಾಂ ಅಧಿಕಾರಿಗಳು ವಿಶೇಷ ತಂಡ
ಬೆಂಗಳೂರು:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ರಾಜ್ಯಾದ್ಯಂತ ಬಿರುಸಿನಿಂದ ನಡೆಯುತ್ತಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿರುವ 68 ಲಕ್ಷ ವಿದ್ಯುತ್ ಗ್ರಾಹಕರ ಪೈಕಿ, ಈಗಾಗಲೇ 34 ಲಕ್ಷ ಗ್ರಾಹಕರು ಅಂದರೆ ಸುಮಾರು ಶೇ.50ರಷ್ಟು ಗ್ರಾಹಕರ ಮಾಹಿತಿಯನ್ನು ಬೆಸ್ಕಾಂ ಸಂಗ್ರಹಿಸಿದೆ.
ಯೋಜನೆಯ ಅರ್ಹ ಫಲಾನುಭವಿಗಳನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂದಿ ಮನೆ ಮನೆಗೆ ತೆರಳಿ ಮಾಹಿತಿ ಪರಿಶೀಲಿಸುತ್ತಿದ್ದಾರೆ. ಫಲಾನುಭವಿಗಳ ವಾಸಸ್ಥಳ, ಕುಟುಂಬದ ವಿವರ ಹಾಗೂ ವಿದ್ಯುತ್ ಬಳಕೆಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ರಾಜ್ಯದ ಮತದಾರರಿಗೆ ಮಾತ್ರವೇ ಈ ಯೋಜನೆಯ ಪ್ರಯೋಜನ ಸಿಗಬೇಕು ಎನ್ನುವುದು ಮುಖ್ಯಮಮತ್ರಿಗಳ ಕಟ್ಟು ನಿಟ್ಟಿನ ನಿರ್ದೇಶನವಾಗಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹ ಸಂದರ್ಭದಲ್ಲಿಯೇ ಆಧಾರ್ ಕಾರ್ಡ್ ಮತ್ತಿತರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ಅಪಾರ್ಟ್‌ಮೆಂಟ್‌ಗಳ ಸವಾಲು:
ನಗರ ಪ್ರದೇಶಗಳಲ್ಲಿನ ಅಪಾರ್ಟ್‌ಮೆಂಟ್‌ಗಳಲ್ಲಿ ಮಾಹಿತಿ ಸಂಗ್ರಹಿಸುವುದು ಸಿಬ್ಬಂದಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಭದ್ರತಾ ವ್ಯವಸ್ಥೆ, ನಿವಾಸಿಗಳು ಮನೆಯಲ್ಲಿ ಲಭ್ಯವಿಲ್ಲದಿರುವುದು ಹಾಗೂ ಪ್ರವೇಶಕ್ಕೆ ನಿರ್ಬಂಧ ಇರುವ ಕಾರಣ ಪರಿಶೀಲನಾ ಕಾರ್ಯ ವಿಳಂಬವಾಗುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳು ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಮತ್ತೊಮ್ಮ ಮನವಿ ಮಾಡಲಾಗಿದೆ. ಪರಿಶೀಲನೆ ಪೂರ್ಣಗೊಂಡ ಬಳಿಕ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯ ಮುಂದುವರಿಯಲಿದ್ದು, ಅನರ್ಹರ ಹೆಸರನ್ನು ಪಟ್ಟಿಯಿಂದ ಕೈಬಿಡುವ ಸಾಧ್ಯತೆಯಿದೆ.
ಪರಿಶೀಲನಾ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲು ಎಸ್ಕಾಂ ಅಧಿಕಾರಿಗಳು ವಿಶೇಷ ತಂಡಗಳನ್ನು ನಿಯೋಜಿಸಿದ್ದು, ಮುಂದಿನ ತಿಂಗಳೊಳಗೆ ಉಳಿದ ಫಲಾನುಭವಿಗಳ ಮಾಹಿತಿಯನ್ನೂ ಸಂಗ್ರಹಿಸುವ ಗುರಿ ಹೊಂದಿದ್ದಾರೆ.

*ರಾಜ್ಯದ ಮತದಾರರಿಗೆ ಮಾತ್ರವೇ ಈ ಯೋಜನೆಯ ಪ್ರಯೋಜನ ಸಿಗಬೇಕು ಎನ್ನುವುದು ಮುಖ್ಯಮಮತ್ರಿಗಳ ಕಟ್ಟು ನಿಟ್ಟಿನ ನಿರ್ದೇಶನವಾಗಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹ ಸಂದರ್ಭದಲ್ಲಿಯೇ ಆಧಾರ್ ಕಾರ್ಡ್ ಮತ್ತಿತರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.