ಪೆಟ್ರೋಲ್ ಬಂಕ್ನಲ್ಲಿ ಹಮ್ಮಿಕೊಂಡಿದ್ದ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಎಸ್ಪಿ ಶಿವಾಂಶು ರಜಪೂತ್ ಸಾರ್ವಜನಿಕರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿದರು. Police
- ಎಸ್ಪಿ ಶಿವಾಂಶು ರಜಪೂತ್ ಮಾಹಿತಿ
ಕೆಜಿಎಫ್: ಕೆಜಿಎಫ್ ಪೊಲೀಸ್ ಜಿಲ್ಲಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು Police ಮತ್ತು ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿ ಪೊಲೀಸ್ ಇಲಾಖೆ ಮಹತ್ವದ ಮತ್ತು ಕಠಿಣ ನಿರ್ಧಾರವನ್ನು ತೆಗೆದುಕೊಂಡು ಕಳೆದ ಡಿ.8 ರಿಂದ ಕೆಜಿಎಫ್ ಪೊಲೀಸ್ ಜಿಲ್ಲಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ ಎಂದು ಎಸ್ಪಿ ಶಿವಾಂಶು ರಜಪೂತ್ ಹೇಳಿದರು.
ತಾಲೂಕಿನ ಪಂತನಹಳ್ಳಿಯಲ್ಲಿ ಶೆಲ್ ಪೆಟ್ರೋಲ್ ಬಂಕ್ ಮಾಲೀಕ ಪ್ರಸಾದ್ ರೆಡ್ಡಿ ಸಾರ್ವಜನಿಕರಿಗೆ ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ಡಿ.8 ರಿಂದ ಇಲ್ಲಿಯವರೆಗೆ ಹೆಲ್ಮೆಟ್ ಧರಿಸದೆ ಕಾನೂನು ಉಲ್ಲಂಘನೆ ಮಾಡಿರುವವರ ವಿರುದ್ಧ ಐಎಂವಿ ಕಾಯ್ದೆಯಡಿ ಒಟ್ಟು 2,869 ಪ್ರಕರಣಗಳನ್ನು ದಾಖಲಿಸಿ 14.34 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ ಎಂದರು.
ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-&ತಾಯಿ, ಪತ್ನಿ, -ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಐಎಸ್ಐ ಮಾರ್ಕ್ ಇರುವ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿ. ಎಲ್ಲ ದ್ವಿಚಕ್ರ ವಾಹನ ಸವಾರರು ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಕೆಜಿಎಫ್ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಕಳೆದ ಮೂರು ವರ್ಷಗಳಲ್ಲಿ ಸುಮಾರು 218 ಮಂದಿ ವಾಹನ ಅಪಘಾತಗಳಲ್ಲಿ ತಮ್ಮ ಅಮೂಲ್ಯವಾದ ಪ್ರಾಣ ಕಳೆದುಕೊಂಡಿದ್ದು, ಇದರ ಪೈಕಿ ಸುಮಾರು 158 ಮಂದಿ ಅಪಘಾತ ಸಂಭವಿಸಿದಾಗ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದರಿಂದ ತಮ್ಮ ಪ್ರಾಣಗಳನ್ನು ಕಳೆದುಕೊಂಡಿರುವುದನ್ನು ಗಮನಿಸಿದರೆ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದು ಎಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ ಎಂಬುದರ ಅರಿವಾಗುತ್ತದೆ ಎಂದರು.
ಶೆಲ್ ಪೆಟ್ರೋಲ್ ಬಂಕ್ ಮಾಲೀಕ ಪ್ರಸಾದ್ ರೆಡ್ಡಿ, ಸಮಾಜ ಸೇವಕ ವೆಂಕಟಕೃಷ್ಣಾರೆಡ್ಡಿ, ಪೊಲೀಸ್ ಇನ್ಸ್ಪೆಕ್ಟರ್ ವೈ.ಆರ್.ರಂಗಶಾಮಯ್ಯ, ಪಿಎಸ್ಐ ಗುರುರಾಜ್ ಚಿಂತಕಲ್, ಎಎಸ್ಐ ರಮೇಶ್ ಇದ್ದರು.