- ಶಾಲೆಗಳಲ್ಲಿ ಲಭ್ಯವಿರುವ ಕನಿಷ್ಠ ಸೀಟುಗಳ ವಿವರಗಳನ್ನು ಏ.17ರಂದು ಪ್ರಕಟಿಸಲಾಗುವುದು
- ಏ.18 ಹಾಗೂ 19ರಂದು ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಯೋಗಾರ್ಥ ಅವಧಿ ಎಂದು ನಿಗದಿ
- ಏ.21ರಿಂದ ಮೇ 17ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) 2026-27ನೇ ಸಾಲಿನಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಮತ್ತೊಮ್ಮೆ ಪರಿಷ್ಕರಿಸಿದೆ. ಅದರಂತೆ ಏ.21ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಎಲ್‌ಕೆಜಿ ಹಾಗೂ ಒಂದನೇ ತರಗತಿ ಪ್ರವೇಶಕ್ಕೆ ಖಾಸಗಿ ಶಾಲೆಗಳಲ್ಲಿ ಶೇ.25ರಂತೆ ಹಾಗೂ ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಕನಿಷ್ಠ ಸೀಟುಗಳ ವಿವರಗಳನ್ನು ಏ.17ರಂದು ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಆಯುಕ್ತರು ತಿಳಿಸಿದ್ದಾರೆ.
ಏ.18 ಹಾಗೂ 19ರಂದು ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಯೋಗಾರ್ಥ ಅವಧಿ ಎಂದು ನಿಗದಿ ಮಾಡಲಾಗಿದೆ. ಬಳಿಕ ಏ.21ರಿಂದ ಮೇ 17ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ಇರಲಿದೆ ಎಂದು ತಿಳಿಸಲಾಗಿದೆ.
ಇಲಾಖೆಯು ಮೇ 22ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಿದೆ. ಮೇ 25ರಂದು ಆನ್‌ಲೈನ್ ಲಾಟರಿ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆಯಾಗಲಿದೆ.