ಆರ್‌ಟಿಇ ಅರ್ಜಿ ಸಲ್ಲಿಕೆ ಆರಂಭ
- ನೆರೆಹೊರೆಯ ಎಲ್ಲ ಶಾಲೆಗಳ ಪಟ್ಟಿಯನ್ನು ಫೆ.12ರಂದು ಬಿಡುಗಡೆ ಮಾಡಲಿದೆ. ಇದಕ್ಕೆ ಆಕ್ಷೇಪಣೆಗಳಿದ್ದಲ್ಲಿ ಫೆ.16ರೊಳಗೆ ಸಲ್ಲಿಸಬಹುದು.
- ಆನ್‌ಲೈನ್ ಅರ್ಜಿ ಸಲ್ಲಿಕೆ: ಫೆ.20 ಹಾಗೂ 21ರಂದು ಪ್ರಾಯೋಗಿಕ ಅರ್ಜಿ ಸಲ್ಲಿಕೆ ನಡೆಯಲಿದೆ
- ಫೆ.24ರಿಂದ ಮಾ.24ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ.
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಶೇ.25ರಷ್ಟು ಉಚಿತ ಸೀಟು ಪಡೆಯಲು ಅರ್ಜಿ ಸಲ್ಲಿಕೆ ಹಾಗೂ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ನೆರೆಹೊರೆಯ ಎಲ್ಲ ಶಾಲೆಗಳ ಪಟ್ಟಿಯನ್ನು ಫೆ.12ರಂದು ಬಿಡುಗಡೆ ಮಾಡಲಿದೆ. ಇದಕ್ಕೆ ಆಕ್ಷೇಪಣೆಗಳಿದ್ದಲ್ಲಿ ಫೆ.16ರೊಳಗೆ ಸಲ್ಲಿಸಬಹುದು. ಫೆ.18ಕ್ಕೆ ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ ನೀಡಲಾಗುವುದು. ಎಲ್‌ಕೆಜಿ ಹಾಗೂ ಒಂದನೇ ತರಗತಿ ಪ್ರವೇಶಕ್ಕೆ ಖಾಸಗಿ ಶಾಲೆಗಳಲ್ಲಿ ಶೇ.25ರಂತೆ ಹಾಗೂ ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಕನಿಷ್ಠ ಸೀಟುಗಳ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.
ಆನ್‌ಲೈನ್ ಅರ್ಜಿ ಸಲ್ಲಿಕೆ: ಫೆ.20 ಹಾಗೂ 21ರಂದು ಪ್ರಾಯೋಗಿಕ ಅರ್ಜಿ ಸಲ್ಲಿಕೆ ನಡೆಯಲಿದೆ. ಫೆ.24ರಿಂದ ಮಾ.24ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ.