ಕಲಬುರಗಿ ಶರಣಬಸವ ವಿವಿಯಲ್ಲಿ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲಿ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಮಾತನಾಡಿದರು. ಪೂಜ್ಯ ದೊಡ್ಡಪ್ಪ ಅಪ್ಪ, ಬಸವರಾಜ ದೇಶಮುಖ, ಪ್ರೊ.ಅನಿಲಕುಮಾರ ಬಿಡವೆ, ಕು.ಭವಾನಿ ಇತರರಿದ್ದರು. 
ರಾಜ್ಯ

ಗ್ರಾಮಾಭಿವೃದ್ಧಿ ಸ್ವಾತಂತ್ರ್ಯದ ಸಂಕೇತ

ಪ್ರಮುಖ ಮುಖ್ಯಾಂಶಗಳು

  • ಕುಲಾಧಿಪತಿ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಹೇಳಿಕೆ
  • ಶರಣಬಸವ ವಿವಿಯಲ್ಲಿ ರಾಷ್ಟ್ರ ಧ್ವಜಾರೋಹಣ
ಕಲಬುರಗಿ: ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ, ಮಹಿಳೆಯರ ಶೈಕ್ಷಣಿಕ ಹಾಗೂ ಆರ್ಥಿಕ ಸಬಲೀಕರಣ ಮತ್ತು ರೈತರ ಬದುಕಿನಲ್ಲಿ ಸುಧಾರಣೆಯೇ ನಿಜವಾದ ಸ್ವಾತಂತ್ರ್ಯದ ಸಂಕೇತ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆದ ಶರಣಬಸವ ವಿವಿ ಕುಲಾಧಿಪತಿ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಹೇಳಿದರು.
ಶರಣಬಸವ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ವಿಜ್ಞಾನ-ತಂತ್ರಜ್ಞಾನ, ರಕ್ಷಣಾ, ಬಾಹ್ಯಾಕಾಶ, ಕೃಷಿ ಸೇರಿ ವಿವಿಧ ಕ್ಷೇತ್ರಗಳಲ್ಲಿ ದೇಶ ಸಾಧಿಸಿರುವ ಅದ್ಭುತ ಪ್ರಗತಿ ಹಿಂದೆ ಅಸಂಖ್ಯಾತ ವಿಜ್ಞಾನಿಗಳು, ತಂತ್ರಜ್ಞಾರು, ಯುವಜನರು ಹಾಗೂ ರೈತರ ನಿರಂತರ ಪರಿಶ್ರಮವಿದೆ ಎಂದರು.
ಕಲ್ಯಾಣ ಕರ್ನಾಟಕ ಜನರಿಗೆ ಶೈಕ್ಷಣಿಕ ಅವಕಾಶದ ವ್ಯಾಪ್ತಿ ವಿಸ್ತರಿಸುವಲ್ಲಿ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಲಿಂ.ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಕೊಡುಗೆ ಅನನ್ಯ. ಕಲಬುರಗಿ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವಲ್ಲಿಯೂ ಅಪ್ಪಾಜಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು.
ಪೂಜ್ಯ ದೊಡ್ಡಪ್ಪ ಅಪ್ಪ ಮಾತನಾಡಿ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಸಮಾಜದ ಎಲ್ಲ ವರ್ಗದವರು ಶ್ರಮಿಸುವುದು ಇಂದಿನ ಅಗತ್ಯ. ಪ್ರತಿಯೊಬ್ಬ ಭಾರತೀಯನ ಧ್ಯೇಯ ರಾಷ್ಟ್ರ ಮೊದಲು ಎಂಬುದಾಗಿರಬೇಕು ಎಂದು ಕರೆ ನೀಡಿದರು.
ಕು.ಭವಾನಿ ಅಪ್ಪ ಮಾತನಾಡಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿವಿ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ, ನಿರ್ದೇಶಕ ಪ್ರೊ.ವಿ.ಡಿ. ಮೈತ್ರಿ, ಕುಲಸಚಿವೆ ಡಾ.ಲಕ್ಷ್ಮೀ ಪಾಟೀಲ್​ ಮಾಕಾ, ಮೌಲ್ಯಮಾಪನ ಕುಲಸಚಿವ ಡಾ.ಎಸ್​.ಎಚ್​. ಹೊನ್ನಳ್ಳಿ, ಹಣಕಾಸು ಅಧಿಕಾರಿ ಡಾ.ಕಿರಣ್​ ಮಾಕಾ ಇತರರಿದ್ದರು.
ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಎನ್​ಸಿಸಿ ಕೆಡೆಟ್​ಗಳು ಆಕರ್ಷಕ ಪಥಸಂಚಲನ ನಡೆಸಿದರು. ಶರಣಬಸವೇಶ್ವರ ರೆಸಿಡೆನ್ಸಿಯಲ್​ ಪಬ್ಲಿಕ್​ ಶಾಲೆ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ವಿವಿಧ ರೂಪಕ ಪ್ರದರ್ಶಿಸುವುದರ ಜತೆಗೆ ಕವಾಯತು ನಡೆಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.
"

ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಜತೆ ಪ್ರಾಮಾಣಿಕತೆ, ದೇಶಭಕ್ತಿ ಹಾಗೂ ಸಾಮಾಜಿಕ ಹೊಣೆಗಾರಿಕೆಯಂತಹ ಮೌಲ್ಯ ಮೈಗೂಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬದುಕಬೇಕು.

— > ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಕುಲಾಧಿಪತಿ, ಶರಣಬಸವ ವಿವಿ