- ಸಾಲುಮರದ ತಿಮ್ಮಕ್ಕ ವಿಧಿವಶ
- ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು
ಬೆಂಗಳೂರು:
ವೃಕ್ಷಮಾತೆ ಎಂದೇ ಕರೆಯಲ್ಪಡುವ ಶತಾಯುಷಿ ಸಾಲುಮರದ ತಿಮ್ಮಕ್ಕನವರು, ಕಳೆದ ಕೆಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ತಿಮ್ಮಕ್ಕನವರು ನಿಧನರಾದರು. ಹಿರಿಯ ಜೀವ ಇನ್ನಿಲ್ಲ ಎಂಬ ಸುದ್ದಿ ತಿಳಿದು ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.