ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಸ್ಕೃತ ಗ್ರಂಥ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರಿಗೆ ಸಂಸ್ಕೃತ ಗ್ರಂಥ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಾ.ಆರ್ ಗಣೇಶ್, ಡಾ.ಎಸ್ ಆಹಲ್ಯ, ಗಿರೀಶ್ ಇತರರಿದ್ದರು. 
ರಾಜ್ಯ

ಸಾಲೂರು ಶ್ರೀಗಳಿಗೆ ಸಂಸ್ಕೃತ ಗ್ರಂಥ ಪುರಸ್ಕಾರ

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಂಸ್ಕೃತ ಮಹಾ ಪ್ರಬಂಧಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯವು ನೀಡುವ 2024ನೇ ಸಾಲಿನ ಸಂಸ್ಕೃತ ಗ್ರಂಥ ಪುರಸ್ಕಾರ ಲಭಿಸಿದೆ.
ಸಾಲೂರು ಶ್ರೀಗಳು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಹಾಗೂ ವಿದ್ವಾಂಸ ಡಾ. ಶರತ್‌ಚಂದ್ರ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಾದರಪಡಿಸಿದ ಸಂಸ್ಕೃತ ಗ್ರಂಥ ‘ಅಂಶುಮದಾಗಮ ಸಂಪದನಾತ್ಮಕ ಮಧ್ಯಯನಮ್’ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ಲಭಿಸಿತ್ತು.
ಈಗ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಈ ಗ್ರಂಥಕ್ಕೆ 2024ನೇ ಸಾಲಿನ ಸಂಸ್ಕೃತ ಗ್ರಂಥ ಪುರಸ್ಕಾರ ನೀಡಿದೆ. ಸೋಮವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಕೃಷ್ಣರಾಜ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಶತಾವಧಾನಿ ಡಾ. ಆರ್. ಗಣೇಶ್, ಸಂಸ್ಕೃತ ವಿವಿ ಕುಲಪತಿ ಡಾ. ಎಸ್.ಆಹಲ್ಯಾ, ಕುಲಸಚಿವ ಪ್ರೊ. ವಿ. ಗಿರೀಶ್ ಚಂದ್ರ, ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಹಾಗೂ ಇತರರಿದ್ದರು.