saluru-sri-awarded-sanskrit-book-award
- * ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಪ್ರದಾನ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಂಸ್ಕೃತ ಮಹಾ ಪ್ರಬಂಧಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯವು ನೀಡುವ 2024ನೇ ಸಾಲಿನ ಸಂಸ್ಕೃತ ಗ್ರಂಥ ಪುರಸ್ಕಾರ ಲಭಿಸಿದೆ.
ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಸಮಾರಂಭದಲ್ಲಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರಿಗೆ ಸಂಸ್ಕೃತ ಗ್ರಂಥ ಪುರಸ್ಕಾರ ನೀಡಿ ಗೌರವಿಸಲಾಯಿತು. ಶತಾವಧಾನಿ ಡಾ.ಆರ್. ಗಣೇಶ್, ಸಂಸ್ಕೃತ ವಿವಿ ಕುಲಪತಿ ಡಾ. ಎಸ್.ಆಹಲ್ಯಾ, ಕುಲಸಚಿವ ಪ್ರೊ. ವಿ. ಗಿರೀಶ್ ಚಂದ್ರ, ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಇತರರು ಇದ್ದರು.
ಸಾಲೂರು ಶ್ರೀಗಳು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಹಾಗೂ ವಿದ್ವಾಂಸ ಡಾ. ಶರತ್‌ಚಂದ್ರ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಾದರಪಡಿಸಿದ ಸಂಸ್ಕೃತ ಗ್ರಂಥ ‘ಅಂಶುಮದಾಗಮ ಸಂಪದನಾತ್ಮಕ ಮಧ್ಯಯನಮ್’ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಲಭಿಸಿತ್ತು.