ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮಕ್ಕೆ ಆಗಮಿಸಿದ್ದ ಸಣ್ಣ ಕೈಗಾರಿಕಾ ಸಚಿವ ವಿಜಯಾನಂದ ಕಾಶಪ್ಪನವರ ಅವರನ್ನು ಮಹಾಲಿಂಗಪುರ ತಾಲೂಕು ಹೋರಾಟ ಸಮಿತಿ ಸದಸ್ಯರು ಭೇಟಿಮಾಡಿ ಮನವಿ ಸಲ್ಲಿಸಿದರು. ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ, ಮಹಾದೇವ ಮೇಟಿ ಹಾಗೂ ನಿಂಗಪ್ಪ ಬಾಳಿಕಾಯಿ ಇದ್ದರು. 
ರಾಜ್ಯ

ಸಿಎಂರೊಂದಿಗೆ ಚರ್ಚೆಗೆ ಸಮಯ ನಿಗದಿಪಡಿಸಿ

ಬಸವರಾಜ ಭೂಷಣ್ಣವರ

ಪ್ರಮುಖ ಮುಖ್ಯಾಂಶಗಳು

  • ಸಚಿವದ್ವಯರಿಗೆ ತಾಲೂಕು ಹೋರಾಟ ಸಮಿತಿಯಿಂದ ಮನವಿ
  • ಮಹಾಲಿಂಗಪುರ ತಾಲೂಕು ರಚನೆ ಬೇಡಿಕೆ

ಮಹಾಲಿಂಗಪುರ: ಮಹಾಲಿಂಗಪುರವನ್ನು ನೂತನ ತಾಲೂಕಾಗಿ ರಚಿಸುವ ಬೇಡಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ಚರ್ಚಿಸಲು ಸಮಯ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಮಹಾಲಿಂಗಪುರ ತಾಲೂಕು ಹೋರಾಟ ಸಮಿತಿ ಸದಸ್ಯರು ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಸಲ್ಲಿಸಿದರು.

ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಭಾನುವಾರ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಸಚಿವದ್ವಯರು ಆಗಮಿಸಿದ್ದ ಸಂದರ್ಭದಲ್ಲಿ ಸಮಿತಿ ಸದಸ್ಯರು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮಹಾಲಿಂಗಪುರ ತಾಲೂಕು ರಚನೆ ಹಲವು ವರ್ಷಗಳ ಬೇಡಿಕೆಯಾಗಿದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ನಿರ್ಣಾಯಕ ಚರ್ಚೆ ನಡೆಯಬೇಕಿದೆ. ಹೀಗಾಗಿ ಮುಖ್ಯಮಂತ್ರಿಗಳ ಭೇಟಿಗೆ ಶೀಘ್ರ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಸಚಿವರು, ತಾಲೂಕು ರಚನೆಗೆ ಸಂಬಂಧಿಸಿದ ಹೋರಾಟ ಸಮಿತಿಯ ಪ್ರಮುಖರೊಂದಿಗೆ ಶೀಘ್ರದಲ್ಲೇ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ, ಮಹಾದೇವ ಮೇಟಿ, ನಿಂಗಪ್ಪ ಬಾಳಿಕಾಯಿ, ಚನ್ನು ದೇಸಾಯಿ, ವೀರೇಶ ಆಸಂಗಿ, ರಫೀಕ್ ಮಾಲದಾರ, ದುಂಡಪ್ಪ ಜಾಧವ, ಮಹೇಶ ಮುಕುಂದ, ಮುತ್ತು ಹೊಸಪೇಟೆ ಸೇರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.