Science helps in innovation 
ರಾಜ್ಯ

ವಿನೂತನ ಆವಿಷ್ಕಾರಕ್ಕೆ ವಿಜ್ಞಾನ ಸಹಕಾರಿ

ಪಟ್ಟನಾಯಕನಹಳ್ಳಿ: ವಿಜ್ಞಾನ ಮನುಷ್ಯನ ಅಭ್ಯುದಯಕ್ಕೆ ಸಹಕಾರಿ, ಹೊಸ ಆವಿಷ್ಕಾರಗಳಿಗೆ ವಿಜ್ಞಾನ ಅತ್ಯವಶ್ಯಕವಾಗಿದೆ ಎಂದು ಸ್ಫಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀ ಗುರು ಬ್ರಹ್ಮೇಶ್ವರ ಸ್ವಾಮಿ ವಿದ್ಯಾಸಂಸ್ಥೆಯಲ್ಲಿ ವಿಜ್ಞಾನ ದಿನದ ಪ್ರಯುಕ್ತ ಗುರುವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ವಾತನಾಡಿದರು.
ಇಂದಿನ ಸ್ಪರ್ಧಾತ್ಮಕ ತಂತ್ರಜ್ಞಾನ ಆಧಾರಿತ ಶಿಕ್ಷಣದ ವೇಗಕ್ಕೆ ವಿದ್ಯಾರ್ಥಿಗಳು ಹೊಂದಿಕೊಳ್ಳುವ ಅವಶ್ಯಕತೆ ಇದ್ದು, ವಿಜ್ಞಾನ ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಶಿಕ್ಷಣ ತಜ್ಞ ಲಡಕು ಜಯರಾಮಯ್ಯ ವಾತನಾಡಿ, ಸಂಶೋಧನೆಗಳ ಮೂಲಕ ವಿಜ್ಞಾನ ಹೊಸ ಹೊಸ ಆವಿಷ್ಕಾರ ವಾಡುತ್ತಾ ಇದೆ. ಜನಸಂಖ್ಯೆ ಆಧಾರದ ಮೇಲೆ ಮನುಷ್ಯನ ಒಳಿತಿಗೆ ಮತ್ತು ಅಭಿವೃದ್ಧಿಗೆ ಹೊಸ ಹೊಸ ಆವಿಷ್ಕಾರಗಳನ್ನು ವಾಡಿದೆ. ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಮುಕ್ತವಾಗಿ ಪ್ರಶ್ನೆ ವಾಡುವ ಪ್ರವೃತ್ತಿ ಬೆಳೆಸಿಕೊಂಡು, ವಿದ್ಯೆಯ ಜತೆಗೆ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದರು.