ವಿಜ್ಞಾನ ಮನುಷ್ಯ ಜೀವನದ ಭಾಗ Science
ನರಸಾಪುರ: ಮನುಷ್ಯನ ಜೀವನದಲ್ಲಿ ವಿಜ್ಞಾನವು ಒಂದು ಭಾಗ. ಆದ್ದರಿಂದಾಗಿ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ. ವಿಜ್ಞಾನದ ಪ್ರದರ್ಶನಗಳು ಮಕ್ಕಳಿಗೆ ಸಹಕಾರಿಯಾಗಲಿವೆ ಎಂದು ಶಿಕ್ಷಣ ಸಂಯೋಜಕ ಶ್ರೀನಿವಾಸ್ ತಿಳಿಸಿದರು.Science
ಕೋಲಾರ ತಾಲೂಕಿನ ನರಸಾಪುರ ಕನಾಟಕ ಪಬ್ಲಿಕ್ (ಕೆಪಿಎಸ್) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಜ್ಞಾನೋತ್ಸವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಮಾನವ ಕುಲದ ಅಭಿವೃದ್ಧಿಗಾಗಿ ಹಾಗೂ ಶಾಂತಿಗಾಗಿ ಶ್ರಮಿಸುತ್ತಿರುವ ವಿಶ್ವದ ಎಲ್ಲ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಬೇಕು. ವಿಜ್ಞಾನದ ಮೂಲಕ ಅನೇಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.
ನರಸಾಪುರ ಕ್ಲಸ್ಟರ್ ಸಿಆರ್ಪಿ ಬಸವರಾಜ್ ಮಾತನಾಡಿ, ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಚಟುವಟಿಕೆಗಳನ್ನು ನಡೆಸಿ ಎಲ್ಲರಲ್ಲೂ ವೈಜ್ಞಾನಿಕ ಮನೋಭಾವ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.