ವಡಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಹಿರಿಯ ನಾಗರಿಕರಿಗಾಗಿ ಆಯೋಜಿಸಿದ ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಽಕಾರಿ ಶರಣಗೌಡ ಪಾಟೀಲ್ ಉದ್ಘಾಟಿಸಿ ಮಾತನಾಡಿದರು. ಡಾ.ರಾಜೇಶ್ವರಿ ಗುತ್ತೇದಾರ, ಪ್ರಕಾಶ ಹೊಸಮನಿ, ಸಿದ್ದಪ್ಪ ಇತರರಿದ್ದರು. 
ರಾಜ್ಯ

ಹಿರಿಯ ನಾಗರಿಕರು ಆರೋಗ್ಯದ ಕಾಳಜಿ ವಹಿಸಲಿ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಅಂಗವಿಕಲ ಇಲಾಖೆ ಅಽಕಾರಿ ಪಾಟೀಲ್ ಹೇಳಿಕೆ
  • ವಡಗೇರಾದಲ್ಲಿ ಸಮುದಾಯ ಭವನದಲ್ಲಿ ಕರ‍್ಯಕ್ರಮ
ವಡಗೇರಾ:

ಹಿರಿಯ ನಾಗರಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯ ಹಾಗೂ ಕಾನೂನು ರಕ್ಷಣೆ ಕುರಿತ ಸಂಪೂರ್ಣ ಅರಿವು ಹೊಂದುವುದರ ಜತೆಗೆ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಽಕಾರಿ ಶರಣಗೌಡ ಪಾಟೀಲ್ ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಹಿರಿಯ ನಾಗರಿಕರ ಉಚಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರಿಗೆ ಸಮಾಜದಲ್ಲಿ ಗೌರವಯುತವಾಗಿ ಬದುಕುವ ಹಕ್ಕು ಇದೆ. ಅವರ ಹಕ್ಕುಗಳಿಗೆ ಧಕ್ಕೆ ಉಂಟಾದಾಗ ಅಥವಾ ಕುಟುಂಬ ಹಾಗೂ ಸಮಾಜದಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾದಾಗ ಮೌನವಾಗಿರದೆ ಕಾನೂನು ನೆರವು ಪಡೆಯಬೇಕು. ಹಿರಿಯ ನಾಗರಿಕರ ರಕ್ಷಣೆಗಾಗಿ ಸರ್ಕಾರ ವಿವಿಧ ಕಾನೂನು ಹಾಗೂ ಸೌಲಭ್ಯ ಜಾರಿಗೊಳಿಸಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಲು ಅಗತ್ಯವಾದ ಮಾಹಿತಿ ಪ್ರತಿಯೊಬ್ಬ ಹಿರಿಯ ನಾಗರಿಕರಿಕರಿಗೆ ತಲುಪಬೇಕು ಎಂದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಽಕಾರಿ ಡಾ.ರಾಜೇಶ್ವರಿ ಗುತ್ತೇದಾರ ಮಾತನಾಡಿ, ವಯಸ್ಸಾದಂತೆ ದೇಹದಲ್ಲಿ ವಿವಿಧ ರೀತಿಯ ಬದಲಾವಣೆ ಕಂಡುಬರುವುದು ಸಹಜ. ಆದರೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡದೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿರಿಯ ನಾಗರಿಕರು ರಕ್ತದೊತ್ತಡ, ಮಧುಮೇಹ ಸೇರಿ ವಯೋಸಹಜ ಆರೋಗ್ಯ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಆಹಾರ ಪದ್ಧತಿ, ನಿಯಮಿತವಾಗಿ ವೈದ್ಯರ ಸಲಹೆ ಪಡೆಯುವುದು ಹಾಗೂ ಅಗತ್ಯ ಔಷಧ ಸರಿಯಾದ ಸಮಯಕ್ಕೆ ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು. ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡುಬAದರೆ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣೆಯನ್ನು ನೇತ್ರ ತಜ್ಞ ಶ್ರೀನಿವಾಸ್ ಪರೀಕ್ಷಿಸಿದರು. ಕಣ್ಣಿನ ಸಮಸ್ಯೆಯಿಂದಾಗಿ ದಿನನಿತ್ಯದ ಚಟುವಟಿಕೆಗಳಲ್ಲಿ ತೊಂದರೆ ಅನುಭವಿಸುತ್ತಿದ್ದ ಹಿರಿಯ ನಾಗರಿಕರಿಗೆ ಉಚಿತ ತಪಾಸಣೆ ಹಾಗೂ ಕನ್ನಡಕ ವಿತರಣೆ ಅನುಕೂಲವಾಯಿತು. ಇಂತಹ ಆರೋಗ್ಯ ಶಿಬಿರಗಳು ಗ್ರಾಮೀಣ ಭಾಗದ ಹಿರಿಯ ನಾಗರಿಕರಿಗೆ ಹೆಚ್ಚಿನ ಪ್ರಯೋಜನ ನೀಡುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಉಪ ತಹಸೀಲ್ದಾರ್ ಪ್ರಕಾಶ ಹೊಸಮನಿ, ನೇತ್ರಾಽಕಾರಿ ಶ್ರೀನಿವಾಸ್, ನಿವೃತ್ತ ಶಿಕ್ಷಕ ಸಿದ್ದಪ್ಪ, ವೈದ್ಯಕೀಯ ಸಿಬ್ಬಂದಿ, ತಾಲೂಕಿನ ಹಿರಿಯ ನಾಗರಿಕರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಭಾಗವಹಿಸಿದ್ದರು.