ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ ಶಿಕ್ಷೆ ಪ್ರಕಟ 
ರಾಜ್ಯ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ

ಪ್ರಮುಖ ಮುಖ್ಯಾಂಶಗಳು

  • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದ ಅಪರಾಧಿಗೆ ಶಿಕ್ಷೆ
  • ಶಿಕ್ಷೆ ನೀಡಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ತೀರ್ಪು
  • ಬೆಳಗಾವಿ ನಗರದಲ್ಲಿ ನಡೆದಿದ್ದ ಘಟನೆ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ ಶಿಕ್ಷೆ ಪ್ರಕಟ


ಬೆಳಗಾವಿ: ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ್ದ ಮಾರುತಿ ನಗರದ ನಿವಾಸಿ ಗಜಾನನ ಅಣ್ಣಪ್ಪ ಪಾಟೀಲ(35) ಅಪರಾಧಿಗೆ 7 ವರ್ಷ ಕಾರಾಗೃಹ ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ.


ಅಪರಾಧಿಯನ್ನು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಅಪಹರಣ ಮಾಡಲು ಯತ್ನಿಸಿ, ದೌರ್ಜನ್ಯ ಪ್ರಕರಣ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ೨೦೨೩ರಲ್ಲಿ ದೂರು ದಾಖಲಾಗಿತ್ತು.ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಸಂತೋಷ ದಳವಾಯಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪಿಸಿದ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ.ರೂ ಪರಿಹಾರ ಧನ ನೀಡುವಂತೆ ಸೂಚಿಸಲಾಗಿದೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ್ ಮಂಡಿಸಿದ್ದರು.