- ಅನುಮತಿ ಪಡೆದ ಸಮಯಕ್ಕಿಂತ ಹೆಚ್ಚು ಸಮಯ ಕಾರ್ಯನಿರ್ವಹಿಸುತಿದ್ದ ಹಿನ್ನಲೆಯಲ್ಲಿ ಶಿಲ್ಪಾ ಶೆಟ್ಟಿ ಮಾಲಿಕತ್ವದ ಪಬ್ ಮೇಲೆ ಪ್ರಕರಣ ದಾಖಲು
- ಪ್ರಸಾರವಾಗುತ್ತಿರುವ ಆರೋಪಗಳು ಆಧಾರರಹಿತ : ನಟಿ ಶಿಲ್ಪಾ ಶೆಟ್ಟಿ
- ನಮಗೆ ಕಾನೂನು ವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ
Shilpa Shetty : ಶಿಲ್ಪಾ ಶೆಟ್ಟಿ (Shilpa Shetty) ಸಹ-ಮಾಲೀಕತ್ವದ ಬಾಸ್ಟಿಯನ್ ಗಾರ್ಡನ್ ಸಿಟಿ ಸೇರಿದಂತೆ ಎರಡು ಪಬ್‌ಗಳು ಅನುಮತಿ ಪಡೆದ ಸಮಯಕ್ಕಿಂತ ಹೆಚ್ಚು ಸಮಯ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪದ ಮೇಲೆ ದಾಖಲಾಗಿರುವ ಪ್ರಕರಣದ ವಿರುದ್ಧ ಪ್ರತಿಕ್ರಿಯೆ ನೀಡಿದ್ದಾರೆ ಪ್ರಸಾರವಾಗುತ್ತಿರುವ ಆಧಾರರಹಿತ ಮತ್ತು ಪ್ರೇರಿತ ಆರೋಪಗಳನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ. ಪ್ರಸಾರವಾಗುತ್ತಿರುವ ವಿಷಯಗಳಿಗೆ ಯಾವುದೇ ಕಾನೂನು ಆಧಾರವಿಲ್ಲದೆ ಕ್ರಿಮಿನಲ್ ಬಣ್ಣ ನೀಡಲಾಗುತ್ತಿದೆ. ಈಗಾಗಲೇ ಮಾನ್ಯ ಹೈಕೋರ್ಟ್‌ನಲ್ಲಿ ರದ್ದುಗೊಳಿಸುವ ಅರ್ಜಿಯನ್ನು ಸಲ್ಲಿಸಲಾಗಿದೆ ಮತ್ತು ಅದು ತೀರ್ಪಿನ ಹಂತದಲ್ಲಿದೆ ಎಂದು ಶಿಲ್ಪಾ ಶೆಟ್ಟಿ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ ನಂತರ, ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ನಾವು ವಿಶ್ವಾಸ ಹೊಂದಿದ್ದೇವೆ ಮತ್ತು ನಮ್ಮ ದೇಶದ ಕಾನೂನು ಜಾರಿ ಅಧಿಕಾರಿಗಳು ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿದ್ದೇವೆ. ಈ ವಿಷಯವು ನ್ಯಾಯಾಲಯದ ವಿಚಾರಣೆಯಲ್ಲಿರುವುದರಿಂದ ಮಾಧ್ಯಮಗಳು ಸಂಯಮದಿಂದ ವರ್ತಿಸಬೇಕೆಂದು ನಾವು ಗೌರವದಿಂದ ಒತ್ತಾಯಿಸುತ್ತೇವೆ ಎಂದು ಅವರು ವಿನಂತಿಸಿದ್ದಾರೆ.
ಬೆಂಗಳೂರು ಪೊಲೀಸರು ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಟಿ ಶಿಲ್ಪಾ ಶೆಟ್ಟಿ ಸಹ-ಮಾಲೀಕತ್ವದ ಬಾಸ್ಟಿಯನ್ ಗಾರ್ಡನ್ ಸಿಟಿ ಸೇರಿದಂತೆ ಎರಡು ಪಬ್‌ಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಬಾಸ್ಟಿಯನ್ ಗಾರ್ಡನ್ ಸಿಟಿಯನ್ನು ಉದ್ಯಮಿ ರಂಜಿತ್ ಬಿಂದ್ರಾ ಸ್ಥಾಪಿಸಿದ ಬಾಸ್ಟಿಯನ್ ಹಾಸ್ಪಿಟಾಲಿಟಿ ನಡೆಸುತ್ತಿದೆ. ಶೆಟ್ಟಿ 2019 ರಲ್ಲಿ ಈ ಉದ್ಯಮದಲ್ಲಿ ಹೂಡಿಕೆ ಮಾಡಿದ್ದಾರೆ ಮತ್ತು ಸಂಸ್ಥೆಯಲ್ಲಿ ಶೇಕಡಾ 50 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 11 ರಂದು ಬೆಳಗಿನ ಜಾವ 1.30 ರ ಸುಮಾರಿಗೆ ಪಬ್‌ನಲ್ಲಿ ತಡರಾತ್ರಿ ಎರಡೂ ಗುಂಪಿನಲ್ಲಿ ನಡೆದ ಘರ್ಷಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಬೆಳವಣಿಗೆಗಳು ನಡೆದಿದೆ.(ಏಜನ್ಸೀಸ್).