ರಾಜ್ಯ

ಶಿವಯೋಗಿ ನಾಟಕ ಪ್ರದರ್ಶನ

ಬಾಬುರಾವ ಯಡ್ರಾಮಿ

ಪ್ರಮುಖ ಮುಖ್ಯಾಂಶಗಳು

  • ಇಂದಿನಿಂದ ಭಕ್ತೋದ್ಧಾರಕ ಹಾಲಪ್ಪಯ್ಯ
ಸೇಡಂ: ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಆವರಣದಲ್ಲಿ ಮಂಗಳವಾರ, ಬುಧವಾರ ಹಾಗೂ ಗುರುವಾರ ಹಾಲಪ್ಪಯ್ಯ ವಿರಕ್ತ ಮಠದ ಶ್ರೀ ಹಾಲಪ್ಪಯ್ಯ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ "ಭಕ್ತೋದ್ಧಾರಕ ಹಾಲಪ್ಪಯ್ಯ ಶಿವಯೋಗಿ' ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಶ್ರೀಮಠದ ಶ್ರೀ ಪಂಚಾಕ್ಷರ ಸ್ವಾಮೀಜಿ ಹೇಳಿದರು.
ರಂಗಕರ್ಮಿ ಶಿವಯ್ಯಸ್ವಾಮಿ ಬಿಬ್ಬಳ್ಳಿ ನಿರ್ದೇಶಿಸಿದ್ದಾರೆ. ಶ್ರೀ ಗುರು ಮಡಿವಾಳೇಶ್ವರ ನವ ತರುಣ ನಾಟ್ಯ ಸಂದಿಂದ ಪ್ರಥಮ ಬಾರಿಗೆ ಪ್ರದರ್ಶನ ನಡೆಯಲಿದೆ. ಹಾಲಪ್ಪಯ್ಯ ವಿರಕ್ತ ಮಠದ ಆಧ್ಯಾತ್ಮಿಕ ಪುರುಷ, ಪವಾಡವನ್ನೇ ಮಾಡುವ ಮೂಲಕ ಸಮಾಜದಲ್ಲಿ ಭಕ್ತಿಯ ಬೀಜ ಬಿತ್ತಿದ ತಪ್ಪಸ್ವಿ ಹಾಲಪ್ಪಯ್ಯ ಶಿವಯೋಗಿಗಳ ಜೀವನ ಚರಿತ್ರೆ ಆಧ್ಯಾತ್ಮಿಕತೆಯಿಂದ ಕೂಡಿದೆ. ಮಂಗಳವಾರ ರಾತ್ರಿ 10ಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ನಾಟಕ ಉದ್ಘಾಟಿಸಲಿದ್ದಾರೆ. ಶ್ರೀ ಶಿವಶಂಕರ ಶಿವಾಚಾರ್ಯ, ಶ್ರೀ ಸದಾಶಿವ ಸ್ವಾಮೀಜಿ, ಶ್ರೀ ಡಾ.ತ್ರಿಮೂರ್ತಿ ಶಿವಾಚಾರ್ಯ, ಶ್ರೀ ಕೊಟ್ಟೂರೇಶ್ವರ ಸ್ವಾಮೀಜಿ, ಶ್ರೀ ಅಭಿನವ ಕಾರ್ತಿಕೇಶ್ವರ ಶಿವಾಚಾರ್ಯರು ಸಾನ್ನಿಧ್ಯವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬುಧವಾರದ ನಾಟಕ ಪ್ರದರ್ಶನಕ್ಕೆ ಮಾಜಿ ಶಾಸಕ ರಾಜಕುಮಾರ ಪಾಟೀಲ್​ ತೆಲ್ಕೂರ ಚಾಲನೆ ನೀಡುವರು. ಶ್ರೀ ಕರುಣೇಶ್ವರ ಶಿವಾಚಾರ್ಯ, ಶ್ರೀ ಶಂಭುಲಿಂಗೇಶ್ವರ ಸ್ವಾಮೀಜಿ, ಶ್ರೀ ಕೇದಾರಲಿಂಗ ದೇವರು, ಶ್ರೀ ಅಭಿನವ ಗವಿಸಿದ್ಧಲಿಂಗ ಶಿವಾಚಾರ್ಯರು ಸಾನ್ನಿಧ್ಯವಹಿಸಲಿದ್ದಾರೆ. ಏ.16ರಂದು ಜೆಡಿಎಸ್​ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ್​ ಚಾಲನೆ ನೀಡುವರು. ಬಿಜೆಪಿ ಮುಖಂಡ ಶಿವಕುಮಾರ ಪಾಟೀಲ್​ ತೆಲ್ಕೂರ ಭಾಗಿಯಾಗುವರು. ಶ್ರೀ ಶಾಂತಸೋಮನಾಥ ಶಿವಾಚಾರ್ಯ, ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ, ಶ್ರೀ ಪ್ರಕಾಶ ತಾತಾ ಸಾನ್ನಿಧ್ಯವಹಿಸಲಿದ್ದಾರೆ. ನಾಟಕದಲ್ಲಿ 20ಕ್ಕು ಅಧಿಕ ಸ್ಥಳಿಯ ಕಲಾವಿದರು ಅಭಿನಯಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಶ್ರೀ ಸದಾಶಿವ ಸ್ವಾಮೀಜಿ, ಶಿವಯ್ಯಸ್ವಾಮಿ ಬಿಬ್ಬಳ್ಳಿ, ಮಹಿಪಾಲರೆಡ್ಡಿ ಮುನ್ನೂರ ಇದ್ದರು.