Siddaramaiah breaks silence, says he is speaking less, not politically silent
- ಕಾರ್ಯಕ್ರಮ, ಅಧಿವೇಶನದಲ್ಲಿ ಭಾಗಿಯಾಗಿದ್ದೇನೆ ಮಾತನಾಡುತ್ತಿಲ್ಲ ಅಷ್ಟೇ, ಆದರೆ ಸೈಲೆಂಟಾಗಿ ಇಲ್ಲ
- ಅಹಿಂದ ಚಳುವಳಿ ವಿಚಾರ ಅಹಿಂದ ಚಳುವಳಿ ಆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗ್ತೇನೆ
- ಮೆಜೆಸ್ಟಿಕ್ ಬಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು: 'ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ, ನಾನು ಹೆಚ್ಚು ಮಾತನಾಡುತ್ತಿಲ್ಲ. ನಾನು ಸಿಎಂ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ' ಎಂದು ಮೆಜೆಸ್ಟಿಕ್ ಬಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ್ದು (
ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ದಿನದಿಂದ ಸೈಲೆಂಟ್ ಆಗಿದ್ದಾರೆ. ಯಾವುದೇ ವಿಚಾರದ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಡುತ್ತಿಲ್ಲ ಎನ್ನುವ ಪ್ರಶ್ನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.
ನಾನು ಸಿಎಂ ಅಲ್ಲ, ಜವಾಬ್ದಾರಿ ಇಲ್ಲ
ನಾನು ಸೈಲಂಟಾಗಿ ಎಲ್ಲಿದ್ದೇನೆ ಹೇಳಿ ಇಂದು ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ್ದೇನೆ,ನಿನ್ನೆ ಅಧಿವೇಶನದಲ್ಲೂ ಭಾಗಿಯಾಗಿದ್ದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದೇನೆ, ನಾನು ಹೆಚ್ಚು ಮಾತನಾಡುತ್ತಿಲ್ಲ ಅಷ್ಟೇನೆ. ಆದರೆ ಸೈಲಂಟಾಗಿ ಇಲ್ಲ. ನಾನು ಸಿಎಂ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್ ಬಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಸಿದ್ದರಾಮಯ್ಯ ಹೇಳಿದರು.
ಬಿಜೆಪಿಯವರಿಗೆ ನೈತಿಕತೆ ಇಲ್ಲ
ಕಾಂಗ್ರೆಸ್ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಸಚಿವ ಸ್ಥಾನವಿಲ್ಲ ಎಂದು ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರಿಗೆ ಯಾವ ನೈತಿಕತೆಯಿದೆ. ಅವರ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ಕೊಟ್ಟಿಲ್ಲ. ನಾನು ಮಹಿಳೆಯರಿಗೆ ಸ್ಥಾನ ಕೊಡಬೇಕು ಎಂದು ಕೇಳಿಕೊಂಡಿದ್ದೇನೆ ಎಂದು ಬಿಜೆಪಿ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಹೈಕಮಾಂಡ್ ನೋಡ್ಕೊಳುತ್ತೆ
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ವಂಚಿತ ಬಸವರಾಜ ಶಿವಣ್ಣನವರ ಬೇಸರ ವ್ಯಕ್ತ ಪಡಿಸಿದ್ದರು. ಕೊನೆಯವರೆಗೂ ನನ್ನ ಹೆಸರು ಸಚಿವ ಸ್ಥಾನ ಪಟ್ಟಿಯಲ್ಲಿತ್ತು. ಆದರೆ, ನಂತರ ಬದಲಾವಣೆಯಾಗಿದೆ ಎಂದಿದ್ದರು ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಹೈಕಮಾಂಡ್ ಆ ವಿಚಾರಗಳನ್ನು ನೋಡಿಕೊಳ್ಳುತ್ತದೆ ಎಂದು ಮಾತನಾಡಿದರು.
ಆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗ್ತೇನೆ ಎಂದು ಮಾಜಿ ಸಿಎಂ ಸಿದ್ದಾರಾಮಯ್ಯ ಹೇಳಿದರು, (ಏಜೆನ್ಸೀಸ್)