ಆನೇಕಲ್ ತಾಲೂಕು ಹುಲಿಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ಒತ್ತಾಯಿಸಿ ಸ್ಮೊಂಡೊವಿಲ್ಲೆ ಅಪಾರ್ಟ್ಮೆಂಟ್ ನಿವಾಸಿಗಳು ಪಂಚಾಯಿತಿ ಮುಂಭಾಗ ಮೌನ ಪ್ರತಿಭಟನೆ ನಡೆಸಿದರು.
ಆನೇಕಲ್ : ತಾಲೂಕಿನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಹುಲಿಮಂಗಲ ಗ್ರಾಪಂ ವ್ಯಾಪ್ತಿಯ ಸಂಪರ್ಕ ರಸ್ತೆಗಳು ಗುಂಡಿಮಯವಾಗಿದ್ದು, ಶೀಘ್ರವೇ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಸೋಮವಾರ ಸ್ಮೊಂಡೊವಿಲ್ಲೆ ಅಪಾರ್ಟ್ಮೆಂಟ್ ನಿವಾಸಿಗಳು ಪಂಚಾಯಿತಿ ಮುಂಭಾಗ ಮೌನ ಪ್ರತಿಭಟನೆ ನಡೆಸಿದರು.
ಹುಲಿಮಂಗಲ ಗ್ರಾಪಂ ವ್ಯಾಪ್ತಿಯ ನಿಯೋಟೌನ್, ಸ್ಮೊಂಡೊವಿಲ್ಲೆ ಅಪಾರ್ಟ್ಮೆಂಟ್ ಸಂಪರ್ಕ ರಸ್ತೆ ಸೇರಿದಂತೆ ಹಲವು ರಸ್ತೆಗಳು ಕಳಪೆಯಿಂದ ಕೂಡಿವೆ. ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟವಾಗಿದೆ. ಹಿರಿಯರು ಈ ರಸ್ತೆಯಲ್ಲಿ ಸಂಚರಿಸಲು ಭಯ ಪಡುತ್ತಾರೆ. ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ತೆರಳುವವರು ಹರಸಾಹಸ ಪಟ್ಟು ಓಡಾಡಬೇಕಾಗಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸದಿರು.
ಅವಶ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕಾದದ್ದು ಸ್ಥಳಿಯ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಹಾಗಾಗಿ ಇವರಿಗೆ ಮಾಹಿತಿ ನೀಡಲು ಮೌನ ಪ್ರತಿಭಟನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಸ್ಥಳಿಯ ಅಂಜನ್ ಕುಮಾರ್ ತಿಳಿಸಿದರು.