Silver Jubilee celebrations for JDS
JDS ಎಂ.ಎನ್.ಕೋಟೆ : ಜೆಡಿಎಸ್ ಪಕ್ಷ ಸ್ಥಾಪನೆಯಾಗಿ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿಯ ಶಿವರಾಂಪುರದಲ್ಲಿ ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಇದೇ ವೇಳೆ ಮಾತನಾಡಿದ ಜೆಡಿಎಸ್ ಮುಖಂಡ ಗೋವಿಂದರಾಜು, ಎಚ್.ಡಿ.ದೇವೇಗೌಡ ಕಟ್ಟಿದ ಜೆಡಿಎಸ್ ಇಡೀ ರಾಜ್ಯದಲ್ಲಿ ಸುಭದ್ರವಾಗಿ, ಸುಭಿಕ್ಷವಾಗಿದೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಬೆಳ್ಳಿಹಬ್ಬ ಆಚರಣೆ ಮಾಡುತ್ತಿರುವುದು ಇದೆ ಮೊದಲು. ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಡೀ ರಾಜ್ಯದಲ್ಲಿ ಜೆಡಿಎಸ್ ಅನ್ನು ಕಟ್ಟಿ ಬೆಳೆಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ರೈತರ ಪರ ಕೆಲಸಗಳನ್ನು ಮಾಡಿ ಅನೇಕ ಸವಾಲುಗಳನ್ನು ಎದುರಿಸಿ ಪಕ್ಷವನ್ನು ಬೆಳೆಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಮುಖಂಡ ಆನಂದ್ ಕುಮಾರ್ ಮಾತನಾಡಿ, ಜೆಡಿಎಸ್ ರಾಜ್ಯದಲ್ಲಿ ಸದೃಢವಾಗಿದೆ. ಮುಂಬರುವ 2028ರ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಜೆಡಿಎಸ್ ಮುಖಂಡರಾದ ರಾಮಯ್ಯ, ಕರೇಗಿರಿಯಪ್ಪ, ಶಾಂತಪ್ಪ, ಲಕ್ಷ$್ಮಯ್ಯ, ಶಿವಣ್ಣ, ಆನಂದ್ ಕುಮಾರ್, ಅಜಯ್,ಕರಿಬಸವಯ್ಯ, ಭರತ್, ಚಂದನ್, ಮಂಜುನಾಥ್ ಮತ್ತಿತರರು ಇದ್ದರು.