SIR process gains momentum in Huliyar.
ಹುಳಿಯಾರು: ಮತದಾರರ ಪಟ್ಟಿಯನ್ನು ಅತ್ಯಂತ ನಿಖರ ಹಾಗೂ ನವೀಕೃತವಾಗಿಡುವ ಉದ್ದೇಶದಿಂದ ಪಟ್ಟಣದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಬಿಎಲ್ಒಗಳು ಪಟ್ಟಣದಾದ್ಯಂತ ಮನೆ ಮನೆಗೆ ಭೇಟಿ ನೀಡಿ, ಮತದಾರರಿಗೆ ಅಗತ್ಯವಿರುವ ಗಣತಿ ನಮೂನೆ ಅರ್ಜಿ ವಿತರಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ, ಮತದಾರರ ಪಟ್ಟಿಯನ್ನು ದೋಷರಹಿತ ಹಾಗೂ ನವೀಕೃತವಾಗಿಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ವಿಶೇಷ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಎಲ್ಲ ಅರ್ಹ ಮತದಾರರು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಕರೆ ನೀಡಿದರು.
ಆರ್ಒ ಶ್ರುತಿ ಬನಾರ, ಬಿಎಲ್ಒ ರಂಗನಾಥ್, ಬಿಎಲ್ಎ ರಾಜ್ಕುಮಾರ್ ಮತ್ತು ಸನತ್ ಮತ್ತು ಸಿಬ್ಬಂದಿ ಇದ್ದರು.