ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿ ಪ್ರಯುಕ್ತ ದೇವನಹಳ್ಳಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಯಪ ಅಧ್ಯಕ್ಷ ವಿ.ಶಾಂತಕುಮಾರ್ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಬಯಪ ನಿರ್ದೇಶಕ ಸಿ.ಪ್ರಸನ್ನಕುಮಾರ್, ಕರವೇ ತಾಲೂಕು ಅಧ್ಯಕ್ಷ ಬಾಬುಗೌಡ ಇತರರು ಇದ್ದರು.
ದೇವನಹಳ್ಳಿ : ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಗಳ ಸಾಧನೆ, ಅವರ ಬದುಕಿನ ಸಂದೇಶ ನಮಗೆಲ್ಲ ದಾರಿದೀಪ ಎಂದು ಬಯಪ ಅಧ್ಯಕ್ಷ ವಿ.ಶಾಂತಕುಮಾರ್ ಹೇಳಿದರು.
ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಸ್ವಾಮೀಜಿಗಳ 119ನೇ ಜಯಂತಿ ಪ್ರಯುಕ್ತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನಿಲ್ದಾಣ ವ್ಯಾಪ್ತಿಯ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿಯರು, ಗರ್ಭಿಣಿಯರು, ಒಳರೋಗಿಗಳು, ಹೊರರೋಗಿಗಳು ಮತ್ತು ವೈದ್ಯಕಿಯ ಸಿಬ್ಬಂದಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದರು. ಅವರು ನಮ್ಮೊಂದಿಗೆ ಶಾಶ್ವತವಾಗಿ ನೆಲೆಸಿದ್ದಾರೆ. ಅಂತಹ ಮಹನೀಯರ ಸ್ಮರಣೆ ಮೂಲಕ ಮುಂದಿನ ಪೀಳಿಗೆಗೆ ಅವರ ನೆನಪು ಅಜರಾಮರವಾಗಿಸಬೇಕಿದೆ ಎಂದರು.
ಬಯಪ ನಿರ್ದೇಶಕ ಸಿ.ಪ್ರಸನ್ನಕುಮಾರ್ ಮಾತನಾಡಿ, ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಸದಾ ಎಲ್ಲರ ಮೇಲಿರಲಿ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಖಾದಿ ಬೋರ್ಡ್ ಅಧ್ಯಕ್ಷ ಜಯರಾಮೇಗೌಡ, ಕೃಷ್ಣಾರೆಡ್ಡಿ, ಪುರಸಭಾ ಸದಸ್ಯ ಎನ್.ರಘು, ಬಿದಲೂರು ಗ್ರಾಪಂ ಮಾಜಿ ಅಧ್ಯಕ್ಷ ನಾಗೇಗೌಡ, ಮಾಜಿ ಸದಸ್ಯ ಗೋಪಾಲಗೌಡ, ಕರವೇ ತಾಲೂಕು ಅಧ್ಯಕ್ಷ ಬಾಬುಗೌಡ, ಪದಾಧಿಕಾರಿಗಳಾದ ಹರ್ಷಿತಗೌಡ, ಬಚ್ಚೇಗೌಡ, ಬೆಟ್ಟಕೋಟೆ, ರಾಯಸಂದ್ರ ಮೂರ್ತಿ, ಮುರಳಿ, ವೈದ್ಯಕಿಯ ಸಿಬ್ಬಂದಿ ಇದ್ದರು.