Site sanctioned for Ayushman Health Centre 
ರಾಜ್ಯ

ಆಯುಷ್ಮಾನ್​ ಆರೋಗ್ಯ ಮಂದಿರಕ್ಕೆ ನಿವೇಶನ ಮಂಜೂರು

ಕೊರಟಗೆರೆ: ಗ್ರಾಮೀಣ ಭಾಗದ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಆಯುಷ್ಮಾನ್​ ಆರೋಗ್ಯ ಮಂದಿರ ನಿರ್ಮಾಣಕ್ಕೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿಯಲ್ಲಿ ಶನಿವಾರ ನಿವೇಶನ ಮಂಜೂರು ಮಾಡಲಾಗಿದೆ.
15ನೇ ಹಣಕಾಸು ಆಯೋಗದ ಯೋಜನೆಯಡಿ ಈ ಆರೋಗ್ಯ ಮಂದಿರಕ್ಕೆ ಈಗಾಗಲೇ ಅನುಮೋದನೆ ದೊರೆತಿದೆ. ಗ್ರಾಮೀಣ ಜನತೆಗೆ ಗುಣಮಟ್ಟದ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಕಟ್ಟಡ ಕಾಮಗಾರಿ ಶ್ರೀ ಆರಂಭವಾಗಲಿದೆ. ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಗೃಹ ಸಚಿವರು ಸೂಚಿಸಿದ್ದರು. ಅದರಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೆಂಡರ್​ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯದೇಶ ಹೊರಡಿಸಿದೆ. ಇಲಾಖೆಯಿಂದ ಅನುಮೋದಿತ ನೆಯಂತೆ ಕಟ್ಟಡ ನಿರ್ಮಾಣಕ್ಕೆ ಕನಿಷ್ಠ 2400 ಚದರ ಅಡಿಗಳ ನಿವೇಶನ ಅಗತ್ಯವಿದ್ದ ಕಾರಣ, ಗ್ರಾಮೀಣ ವ್ಯಾಪ್ತಿಯಲ್ಲಿ ಗ್ರಾಮಸ್ಥರ ಸಮ್ಮತಿಯೊಂದಿಗೆ ಸೂಕ್ತ ಜಾಗ ಆಯ್ಕೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಹಾಗೂ ಸಂಬಂಧಿತ ಇಲಾಖೆಗಳ ಸಂಯುಕ್ತ ಸಹಕಾರದಿಂದ ನಿವೇಶನವನ್ನು ಅಳತೆ ಮಾಡಿ, ಗಡಿ ಗುರುತಿಸಿ, ಗ್ರಾಪಂನಲ್ಲಿ ಖಾತೆ ತೆರೆಯುವ ಮೂಲಕ ಅಧಿಕೃತವಾಗಿ ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಯಿತು.