ಆರೋಪಿ ಮಹೇಶ್ ತಳವಾರ್ 
ರಾಜ್ಯ

ಭೀಮಾತೀರದಲ್ಲಿ ಆರು ಮಂದಿಯ ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿದ ಪೊಲೀಸರು | Bheema Theera

ವಿಜಯಪುರ: ಚಡಚಣ ತಾಲೂಕಿನ ಗೋವಿಂದಾಪುರ ಗ್ರಾಮದಲ್ಲಿ ಕಳೆದ ತಿಂಗಳ ನಡೆದ ಭೀಕರ ಹತ್ಯಾಕಾಂಡ (Bheema Theera) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ(ಜೂ. 22) ಪೊಲೀಸರು ಮತ್ತೊಬ್ಬ ಆರೋಪಿ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಇಟ್ಟಿಂಗಿಹಾಳ ಗ್ರಾಮದ ಹೊರ ವಲಯದಲ್ಲಿ ಘಟನೆ ನಡೆದಿದ್ದು, ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಮಹೇಶ್ ತಳವಾರ್ ಮೇಲೆ ಫೈರಿಂಗ್ ಮಾಡಿ ಚಡಚಣ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬಂಧಿಸಲು ಹೋದಾಗ ಓಡಿ ಹೋಗಲು ಯತ್ನಿಸಿದ್ದು, ಮತ್ತೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ವೇಳೆ ಆತ್ಮರಕ್ಷಣೆಗಾಗಿ ಚಡಚಣ ಸಿಪಿಐ ಪರಶುರಾಮ್ ಮನಗೂಳಿ, ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಚಡಚಣ ಠಾಣೆ ಸಿಬ್ಬಂದಿ ಶೇಖರ್ ಪವಾರ್, ವಿಜಯಕುಮಾರ್ ಬನಸೋಡೆಗೆ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಆರೋಪಿ ಮಹೇಶ್ ತಳವಾರ್ ಬಲಗಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇನ್ನೂ ಗೋವಿಂದಾಪುರದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಪೊಲೀಸರು, ಮಹಾಸಿದ್ದ ಶ್ರೀಮಂತ ಬಿರಾದಾರ, ಲಯಪ್ಪ ನೆನಪ್ಪ ಬಿರಾದಾರ, ಕಲ್ಲಾಣಗೌಡ ಈಶ್ವರಗೌಡ ಪಾಟೀಲ್ ಸೇರಿದಂತೆ ಒಟ್ಟು 12 ಮಂದಿಯನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.