SKDRDP helps improve the standard of living.
ಬುಕ್ಕಾಪಟ್ಟಣ: ಗ್ರಾಮೀಣ ಪ್ರದೇಶದ ಮಹಿಳೆಯರ ಜೀವನಮಟ್ಟ ಸುಧಾರಿಸುವ ಅನೇಕ ಉಪಯುಕ್ತ ಯೋಜನೆಗಳನ್ನು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಾರಿಗೆ ತರುತ್ತಿದೆ ಎಂದು ಹೊಸಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕಿ ಶ್ರುತಿ ತಿಳಿಸಿದರು.
ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಹೊಸಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ಹೇಮಾವತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಹಿಳೆಯರನ್ನು ಆರ್ಥಿಕವಾಗಿ ಸಧೃಡಗೊಳಿಸುವುದು, ಮಾನಸಿಕವಾಗಿ ಧೈರ್ಯ ತುಂಬುವುದು, ಜೀವನೋಪಾಯಕ್ಕಾಗಿ ತರಬೇತಿ ಶಿಬಿರ ಏರ್ಪಡಿಸುವುದು, ಶಿಬಿರಗಳಲ್ಲಿ ಕಲಿತ ಹಾಗೂ ತಯಾರಿಸಿದ ವಸ್ತುಗಳಿಳನ್ನು ಮಾರುಕಟ್ಟೆಗೆ ಒದಗಿಸುವುದು ಸೇರಿದಂತೆ ಹಲವು ರೀತಿಯಲ್ಲಿ ಮಹಿಳೆಯರ ಸ್ಥಾನಮಾನ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.
ಜ್ಞಾನ ವಿಕಾಸ ಕಾರ್ಯಕ್ರಮ ಮಹಿಳೆಯರಿಗೆ ಕುಟುಂಬ ನಿರ್ವಹಣೆ ಮಾಡಲು ಉತ್ತಮ ಮಾಹಿತಿ, ಆರ್ಥಿಕ ಸಬಲತೆ ಹಾಗೂ ಪ್ರಚಲಿತ ವಿದ್ಯಮಾನದ ಜೀವನಶೈಲಿ ಬಗ್ಗೆ ಅರಿಯಲು ಬಹಳ ಪ್ರಾಮುಖ್ಯತೆ ಹೊಂದಿವೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೇಂದ್ರ ಅಧ್ಯಕ್ಷೆ ಮುಬೀನಾ ವಿಜ್ಞಾನ ವಿಕಾಸ ಕಾರ್ಯಕ್ರಮಗಳಿಗೆ ಭಾಗವಹಿಸುವ ಅನಿವಾರ್ಯತೆ ಹಾಗೂ ಅವಶ್ಯಕತೆಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಚಂದ್ರಶೇಖರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಟಿ.ಆಶಾ, ಸೇವಾ ಪ್ರತಿನಿಧಿ ಭಾಸ್ಕರ್, ಧರ್ಮಸ್ಥಳ ಸಂಘದ ಸದಸ್ಯರು, ಗ್ರಾಮಸ್ಥರು ಇದ್ದರು.