ಚಿಕ್ಕನಾಯಕನಹಳ್ಳಿಯ ಜ್ಞಾನವಿಕಾಸ ಕೇಂದ್ರದಲ್ಲಿ annual dayಹಮ್ಮಿಕೊಂಡಿದ್ದ ವಾರ್ಷಿಕೋತ್ಸವವನ್ನು ಸಮನ್ವಯಾಧಿಕಾರಿ ಕವಿತಾ ಉದ್ಘಾಟಿಸಿದರು. ಗ್ರಾಪಂ ಸದಸ್ಯೆ ಭಾರತಮ್ಮ, ಒಕ್ಕೂಟದ ಅಧ್ಯಕ್ಷೆ ಇಂದ್ರಮ್ಮ ಇದ್ದರು.
ಚಿಕ್ಕನಾಯಕನಹಳ್ಳಿ :ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮಗಳ ಮೂಲಕ ಮಹಿಳೆಯರಿಗೆ ಹಲವಾರು ಮಾಹಿತಿ ದೊರೆಯುತ್ತಿದ್ದು, ಕುಟುಂಬ ನಿರ್ವಹಣೆಗೆ ಪೂರಕವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜಾಗೃತಿ ವೇದಿಕೆ ಸದಸ್ಯ ಉಮೇಶ್ ತಿಳಿಸಿದರು.
ಪಟ್ಟಣದ ಹೊಸಬೀದಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ನಿಂದ ಜ್ಞಾನವಿಕಾಸ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಮಹಿಳೆಯರ ಕೌಶಲಾಭಿವೃದ್ಧಿಗೆ ಹಾಗೂ ಸ್ವ&ಉದ್ಯೋಗಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರೇರಣೆ ಎಂದರು.annual day
ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ಸಾಂಸತಿಕ ಕಾರ್ಯಕ್ರಮ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದ್ದ ಸದ್ಯಸರಿಗೆ ಬಹುಮಾನ ವಿತರಿಸಲಾಯಿತು. ಮುಖಂಡ ಮಲ್ಲಿಕಾರ್ಜುನಯ್ಯ, ವಲಯದ ಸೇವಾ ಪ್ರತಿನಿಧಿಗಳಾದ ಹೇಮಾ, ನೇತ್ರಾವತಿ, ಪುಷ್ಪಮ್ಮ ಇದ್ದರು.
ಚಿಕ್ಕನಾಯಕನಹಳ್ಳಿಯ ಜ್ಞಾನವಿಕಾಸ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವವನ್ನು ಸಮನ್ವಯಾಧಿಕಾರಿ ಕವಿತಾ ಉದ್ಘಾಟಿಸಿದರು. ಗ್ರಾಪಂ ಸದಸ್ಯೆ ಭಾರತಮ್ಮ, ಒಕ್ಕೂಟದ ಅಧ್ಯಕ್ಷೆ ಇಂದ್ರಮ್ಮ ಇದ್ದರು.