ಕಲಬುರಗಿ ತಾಲೂಕಿನ ಸೀತನೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಜತೆ ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಂದಿಕೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪವನಕುಮಾರ ವಳಕೇರಿ ನೇತೃತ್ವದ ನಿಯೋಗ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿಯವರಿಗೆ ಗುರುವಾರ ಮನವಿಪತ್ರ ಸಲ್ಲಿಸಿತು. ಗುಲಾಬ್​ ಮೊಹ್ಮದ್​ ಜುನೈದಿ ಇತರರಿದ್ದರು. 
ರಾಜ್ಯ

ಸೀತನೂರದಲ್ಲಿ ಕುಡಿವ ನೀರಿನ ಸಮಸ್ಯೆ ಪರಿಹರಿಸಿ

ಜಯತೀರ್ಥ ಪಾಟೀಲ

ಪ್ರಮುಖ ಮುಖ್ಯಾಂಶಗಳು

  • ಅಪರ ಡಿಸಿಗೆ ನಂದಿಕೂರ ಗ್ರಾಪಂ ಮಾಜಿ ಅಧ್ಯಕ್ಷ ಪವನಕುಮಾರ ವಳಕೇರಿ ನೇತೃತ್ವದ ನಿಯೋಗ ಮನವಿ
ಕಲಬುರಗಿ: ಸೀತನೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಜತೆ ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಂದಿಕೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪವನಕುಮಾರ ವಳಕೇರಿ ನೇತೃತ್ವದ ನಿಯೋಗ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿಯವರಿಗೆ ಗುರುವಾರ ಮನವಿಪತ್ರ ಸಲ್ಲಿಸಿತು.
ಸೀತನೂರ ಜನ ಮಾತ್ರವಲ್ಲದೆ ಜಾನುವಾರುಗಳು ಅನೇಕ ದಿನಗಳಿಂದ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿವೆ. ಎರಡು ಕಿಮೀ ದೂರದಲ್ಲಿರುವ ಹಳೆಯ ತೆರೆದ ಬಾವಿ ಇದ್ದು, ನಿರಂತರ ಜ್ಯೋತಿ ವಿದ್ಯುತ್​ ಸಂಪರ್ಕ ಕಲ್ಪಿಸಿದಲ್ಲಿ ಊರಿನ ನೀರಿನ ಸಮಸ್ಯೆಗೆ ಪರಿಹಾರ ದೊರಕಲಿದೆ. ಗ್ರಾಪಂ ಚುನಾಯಿತ ಪ್ರತಿನಿಧಿಗಳ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು.
ಸೀತನೂರ ಗ್ರಾಮದ ಕೊಳವೆಬಾವಿಯ ಹಾಳಾದ ಮೋಟಾರು ಬದಲಾಯಿಸಬೇಕು. ಟ್ಯಾಂಕರ್​ ನೀರು ವ್ಯವಸ್ಥೆ ಮಾಡಬೇಕು. ಜಾನುವಾರುಗಳಿಗೆ ನೀರಿನ ತೊಟ್ಟಿ ಮಾಡಬೇಕು ಎಂದು ನಿಯೋಗ ಒತ್ತಾಯಿಸಿತು. ಶಿವರಾಜ ದಿಗ್ಗಾವಿ, ಗುಲಾಬ್​ ಮೊಹ್ಮದ್​ ಜುನೈದಿ, ಮೊಹ್ಮದ್​ ಫಾರೂಕ್​ ಜುನೈದಿ ಇತರರಿದ್ದರು.