ದೊಡ್ಡಾಲತ್ತೂರು ಗ್ರಾಮದಲ್ಲಿ ತಲೆದೂರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.  
ರಾಜ್ಯ

ದೊಡ್ಡಾಲತ್ತೂರಿನಲ್ಲಿ ನಿರಿನ ಸಮಸ್ಯೆ ಬಗೆಹರಿಸಿ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಕುಡಿಯುವ ನೀರಿನ ಸಮಸ್ಯೆ
  • ದೊಡ್ಡಾಲತ್ತೂರು ಗ್ರಾಮಸ್ಥರು
ಹನೂರು: ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ತಾಲೂಕಿನ ದೊಡ್ಡಾಲತ್ತೂರು ಗ್ರಾಮಸ್ಥರು ಒತ್ತಾಯಿಸಿದರು.
ಗ್ರಾಮದಲ್ಲಿ ಹೆಚ್ಚು ಬಡ ಕುಟುಂಬಗಳಿದ್ದು, ಕೂಲಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಇತ್ತೀಚಿಗೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. 3 ದಿನಕ್ಕೊಮ್ಮೆ ಟ್ಯಾಂಕರ್ ಮೂಲಕ ಪೂರೈಕೆಯಾಗುತ್ತಿರುವ ನೀರು ಜನಸಂಖ್ಯೆಗೆ ಅನುಗುಣವಾಗಿ ಸಾಲುತ್ತಿಲ್ಲ. ಕೂಲಿ ಕೆಲಸವನ್ನು ಬಿಟ್ಟು ಟ್ಯಾಂಕರ್ ಬರುವುದನ್ನೇ ಕಾಯಬೇಕಿದೆ. ಜಮೀನಿನ ಪಂಪ್‌ಸೆಟ್‌ಗಳಿಗೆ ತೆರೆಳಿ ಕುಡಿವ ನೀರನ್ನು ಹೊತ್ತು ತರುವ ಸ್ಥಿತಿ ಇದ್ದು, ತೊಂದರೆ ಅನುಭವಿಸುವಂತಾಗಿದೆ.
ಇತ್ತ ಜಾನುವಾರುಗಳಿಗೂ ನೀರಿನ ಸಮಸ್ಯೆ ಎದುರಾಗಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಪಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಟ್ಯಾಂಕರ್ ಮೂಲಕ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು. ಇಲ್ಲವಾದಲ್ಲಿ ಗ್ರಾಮಸ್ಥರ ಜತೆಗೂಡಿ ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕನ್ನಡಿಗರ ವಿಜಯಸೇನೆ ಸಂಘಟನೆ ರಾಜ್ಯ ಕಾರ್ಯದರ್ಶಿ ಪೊನ್ನಾಚಿ ಸ್ನೇಹಜೀವಿ ರಾಜು ಎಚ್ಚರಿಸಿದ್ದಾರೆ.
ಗ್ರಾಮಕ್ಕೆ ಟ್ಯಾಂಕರ್ ಮೂಲಕ ಪೂರೈಕೆಯಾಗುತ್ತಿರುವ ನೀರು ಸಾಲುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಹಾಗಾಗಿ ಖಾಸಗಿ ಬೋರ್‌ನಿಂದ ಪೈಪ್‌ಲೈನ್ ಕಾಮಗಾರಿಗೆ ಕೈಗೊಂಡು ಸಮರ್ಪಕ ನೀರು ಪೂರೈಕೆ ಅಗತ್ಯ ಕ್ರಮವಹಿಸಲಾಗುವುದು.
ಸೆಲ್ವರಾಜ್ ಪಿಡಿಒ