ಮಾಲೂರುMLA ತಾಲೂಕು ತೊರ್ನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ.ನಂಜೇಗೌಡ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. 
ರಾಜ್ಯ

ಸ್ಥಳದಲ್ಲೇ ಜನರ ಸಮಸ್ಯೆಗಳಿಗೆ ಪರಿಹಾರ MLA

ಕೋಲಾರ ಡೆಸ್ಕ್

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ
ಮಡಿವಾಳ: ತಾಲೂಕು ಆಡಳಿತ, ಶಾಸಕರ ನಡೆ ಗ್ರಾಮದ ಕಡೆ ಕಾರ್ಯಕ್ರಮ MLA ಪಂಚಾಯಿತಿ ಕೇಂದ್ರಗಳಲ್ಲಿ ಏರ್ಪಡಿಸುತ್ತಿರುವುದರಿಂದ ತಾಲೂಕು ಕಚೇರಿಗಳಿಗೆ ಜನರು ಅಲೆಯುವುದನ್ನು ತಪ್ಪಿಸಲು ಹಾಗೂ ಮಧ್ಯವರ್ತಿಗಳಿಂದ ದೂರವಿಡಲು ಇದು ಸಹಕಾರಿಯಾಗುತ್ತದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.
ತಾಲೂಕಿನ ತೊರ್ನಹಳ್ಳಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ "ತಾಲೂಕು ಆಡಳಿತ, ಶಾಸಕರ ನಡೆ ಗ್ರಾಮದ ಕಡೆ' ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸಾರ್ವಜನಿಕರ ಸಮಸ್ಯೆಗಳು ಹಾಗೂ ಇಲಾಖಾವಾರು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪಂಚಾಯಿತಿ ಕೇಂದ್ರಗಳಲ್ಲಿ ಸಾರ್ವಜನಿಕರ ಕಾರ್ಯಕ್ರಮ ಏರ್ಪಡಿಸಿ ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ ನೀಡಲಾಗುತ್ತಿದೆ. ಯಾವುದೇ ರಾಜಕೀಯ ಇಲ್ಲದೆ ಎಲ್ಲವೂ ಸರ್ಕಾರಿ ಅಧಿಕಾರಿಗಳಿಂದಲೇ ಕಾರ್ಯಕ್ರಮ ನಡೆಯುತ್ತಿದ್ದು ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಬಹುದಾಗಿದೆ ಎಂದರು.
ತಹಸೀಲ್ದಾರ್​ ಎಂ.ವಿ.ರೂಪಾ ಮಾತನಾಡಿ, ಕಂದಾಯ ಇಲಾಖೆಯಿಂದ ಸಿಗುವ ಎಲ್ಲ ಮನವಿಗಳಿಗೂ ಮತ್ತು ಇತರ ಇಲಾಖೆಯಿಂದ ಸಿಗುವ ಮನವಿಗೂ ಪರಿಹಾರ ಕಲ್ಪಿಸಲಾಗುತ್ತದೆ. ಪ್ರತಿಯೊಬ್ಬರು ತಮ್ಮ ಅಹವಾಲನ್ನು ಅರ್ಜಿ ಮುಖಾಂತರ ನೀಡಬೇಕು, ಇಲ್ಲದಿದ್ದರೆ ಸಭೆಯಲ್ಲಿ ಮಂಡಿಸಿದರೂ ಅದಕ್ಕೆ ಸೂಕ್ತ ಪರಿಹಾರ ಕಲ್ಪಿಸಿಕೊಡಲು ತಾಲೂಕು ಆಡಳಿತ ಮುಂದಾಗುತ್ತದೆ ಎಂದರು.
ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಕಂದಾಯ ಇಲಾಖೆ ಆಹಾರ ನಾಗರಿಕ ಮತ್ತು ಸರಬರಾಜು ಇಲಾಖೆ ಸೇರಿ ಇತರೆ ಇಲಾಖೆಗಳಿಂದ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು 65 ಅರ್ಜಿಗಳು ಸ್ವೀಕೃತಗೊಂಡರೆ ಕಂದಾಯ ಇಲಾಖೆಯ 94ಸಿ 63 ಅರ್ಜಿ ಸ್ವಿಕೃತಗೊಂಡವು ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಯಿತು.
ತಾಪಂ ಇಒ ವಿ.ಕೃಷ್ಣಪ್ಪ, ಗ್ರಾಪಂ ಅಧ್ಯಕ್ಷ ಅಶ್ವತ್ಥಮ್ಮ ರಾಮಯ್ಯ, ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಜಯ ನರಸಿಂಹ, ದರ್ಖಾಸ್ತು ಸಮಿತಿ ಅಧ್ಯಕ್ಷ ಹನುಮಂತಪ್ಪ, ಪಿಎಲ್​ಡಿ ಬ್ಯಾಂಕ್​ ಅಧ್ಯಕ್ಷ ಶ್ರೀನಿವಾಸ್​, ಪೊಲೀಸ್​ ಇಲಾಖೆಯ ರಾಮಪ್ಪ ಗುತ್ತರ್​, ವಿವಿಧ ಇಲಾಖೆಗಳ ಅಧಿಕಾರಿಗಳಾದ ರಾಜು, ಜಬಿವುಲ್ಲಾ, ಚಲಪತಿ, ಮಂಜುನಾಥ್​, ಅನ್ಸರ್​ ಬಾಷಾ, ಅಭಿಜಿತ್​, ದಿವ್ಯಾ, ವೀಣಾ, ಶೋಭಾ, ರಾಜಸ್ವ ನಿರೀಕ್ಷಕ ಅರುಣ್​ಕುಮಾರ್​, ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್​, ಗೋಪಿನಾಥ್​, ಕಿರಣ್​, ಪಿಡಿಒ ಸಿ.ಆರ್​. ಗೌಡ, ಕಾರ್ಯದರ್ಶಿ ವನಜಾಕ್ಷಿ ಇದ್ದರು.