ಪಟ್ಟಣದ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿಗೆ ಗುರುವಾರ ಮಕರ ಸಂಕ್ರಾಂತಿ ಪ್ರಯುಕ್ತ ಬೆಣ್ಣೆ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.  
ರಾಜ್ಯ

ಶ್ರೀ ಲಕ್ಷ್ಮೀನಾರಾಯಣ ದೇಗುಲದಲ್ಲಿ ವಿಶೇಷ ಪೂಜೆ

ಕೊಳ್ಳೇಗಾಲ: ಪಟ್ಟಣದ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿಗೆ ಗುರುವಾರ ಮಕರ ಸಂಕ್ರಾಂತಿ ಪ್ರಯುಕ್ತ ಬೆಣ್ಣೆ ಅಲಂಕಾ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಗೆ ಬೆಳಗ್ಗೆ 4.30ಕ್ಕೆ ಸುಪ್ರಭಾತ ಸೇವೆ, ಅಭಿಷೇಕ, ಅರ್ಚನೆ, ಮಹಾ ಮಂಗಳಾರತಿ ಮಾಡಲಾಯಿತು. ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಮಾಡಿದ ಭಕ್ತರಿಗೆ ಸಕ್ಕರೆ ಪೊಂಗಲ್ ವಿತರಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.

ಸ್ವರ್ಗದ ಬಾಗಿಲ ದರ್ಶನ:
ಮಕರ ಸಂಕ್ರಾಂತಿ ವಿಶೇಷದಲ್ಲಿ ದೇವಾಲಯದಲ್ಲಿ ಸಂಜೆ ಉತ್ತರಾಯಣ ಪುಣ್ಯಕಾಲ ವೈಕುಂಠ ದ್ವಾರವನ್ನು ತೆರೆದು ಭಕ್ತರಿಗೆ ಸ್ವಗರ್ದ ಬಾಗಿಲ ದರ್ಶನ ವ್ಯವಸ್ಥೆ ಮಾಡಲಾಗಿತ್ತು. ಶೇಷಾದ್ರಿ ಭಟ್, ಸುದರ್ಶನ್ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು.