ಬೆಂಗಳೂರು: ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆಯು ಯಶವಂತಪುರ-ಮಡಗಾಂವ್ ಮತ್ತು ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸೇವೆ ಕಲ್ಪಿಸಿದೆ. ಪ್ರತಿ ವಾರ್ಗದಲ್ಲಿಯೂ ತಲಾ ಒಂದು ಟ್ರಿಪ್ ಸಂಚರಿಸಲಿದೆ.
ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ ಪ್ರೆಸ್ 06591 ಸಂಖ್ಯೆ ರೈಲು ನ.6ರಂದು ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ನ.7ರಂದು ಸಂಜೆ 6.10ಕ್ಕೆ ಮಡಗಾಂವ್ ತಲುಪಲಿದೆ.
ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ 06592 ಸಂಖ್ಯೆ ರೈಲು ನ.8ರಂದು ಬೆಳಗ್ಗೆ 11 ಗಂಟೆಗೆ ಮಡಗಾಂವ್‌ನಿಂದ ಹೊರಟು, ನ.9ರಂದು ಸೋಮವಾರದಂದು ಮುಂಜಾನೆ 5:20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಈ ಮಾರ್ಗಗಳ ಮಧ್ಯೆ ಬರುವ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಮಂಗಳೂರು ಜಂಕ್ಷನ್, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಣಕೋಣ ನಿಲ್ದಾಣಗಳಲ್ಲಿ ವಿಶೇಷ ರೈಲುಗಳು ನಿಲುಗಡೆಯಾಗಲಿದೆ. ಮರು ಪ್ರಯಾಣದ ವೇಳೆ 06592 ಸಂಖ್ಯೆ ರೈಲು ಯಶವಂತಪುರದಲ್ಲಿ ನಿಲುಗಡೆ ಇರುವುದಿಲ್ಲ, ಇದರ ಹೊರತಾಗಿ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ.