D.K. Shivkumar 
ರಾಜ್ಯ

ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ ವಿಶೇಷ ಪೂಜೆ ಇಂದು

ಮಳವಳ್ಳಿ: ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ನ.26 ರಂದು ಮಾರೇಹಳ್ಳಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಸ್ತುತ ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಅಧಿಕಾರ ಹಂಚಿಕೆ ಸಂಬಂಧ ರಾಜಕೀಯ ನಾಯಕರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಸ್ಥಾನ ಪಲ್ಲಟ ವಿಚಾರವಾಗಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಈ ವಿಚಾರವಾಗಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ದೇವರಲ್ಲಿ ಕೋರಿಕೆ ಸಲ್ಲಿಸಲು ತಾಲೂಕು ಒಕ್ಕಲಿಗರ ಸಂಘ ನಿರ್ಧರಿಸಿದೆ. ಈ ವಿಶೇಷ ಪೂಜೆಯನ್ನು ಬೆಳಗ್ಗೆ 10.30 ಗಂಟೆ ಹಮ್ಮಿಕೊಳ್ಳಲಾಗಿದ್ದು, ಒಕ್ಕಲಿಗ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಮತ್ತು ರೈತ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ವಿ.ಪಿ.ನಾಗೇಶ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.