ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಉದ್ಘಾಟಿಸಿದರು. ಪ್ರೊ.ಪಂಪಾಪತಿರೆಡ್ಡಿ, ಡಾ. ಜಯಶ್ರೀ ಬಿ. ಶೆಟ್ಟಿ, ಡಾ. ಬಿ.ಆರ್. ಕೇತನ್ಕರ್, ಎನ್‌ಎಸ್‌ಎಸ್ ಅಧಿಕಾರಿ ಡಾ.ಚಂದ್ರಶೇಖರ ಕೊಂಕಲ್ ಇತರರಿದ್ದರು.
- ಶಾಸಕ ಚನ್ನಾರಡ್ಡಿ ಪಾಟೀಲ್ ಅಭಿಮತ
- ಸರ್ಕಾರಿ ಪದವಿ ಕಾಲೇಜಿನಲ್ಲಿ ಕಾರ್ಯಕ್ರಮ
ಯಾದಗಿರಿ: ರಾಷ್ಡ್ಟೀಯ ಸೇವಾ ಯೋಜನೆಯಿಂದ (ಎನ್‌ಎನ್‌ಎಸ್) ವಿದ್ಯಾರ್ಥಿಗಳಲ್ಲಿ ಉತ್ತಮ ಗುಣ ಬೆಳೆಸಿ ಜವಾಬ್ದಾರಿಯುತ ನಾಗರಿಕರನ್ನಾರುವುದು ಅಲ್ಲದೆ ಸೇವಾ ಮನೋಭಾವ ಬೆಳೆಯುತ್ತದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲï ತುನ್ನೂರ ಹೇಳಿದರು.
ಇಲ್ಲಿಯ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಡ್ಟೀಯ ಸೇವಾ ಯೋಜನೆಯನ್ನು ಸಸಿಗೆ ನೀರುಣಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ಗುಣ ಬೆಳೆಸಿಕೊಳ್ಳಬೇಕು. ಇಂತಹ ಗುಣಗಳನ್ನು ಹೊಂದಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ದೇಶ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಎನ್‌ಎಸ್‌ಎಸ್ ಶಿಬಿರ ವಿದ್ಯಾರ್ಥಿಗಳಿಗೆ ಸಾಮಾಜಿಕ ಕಾಳಜಿ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ. ಶಿಬಿರ ಯಶಸ್ಸು ಆಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಸುಭಾಷ್‌ಚಂದ್ರ ಕೌಲಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಹೊಂದಾಣಿಕೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಆರಂಭದಿಂದಲೂ ಅಭ್ಯಾಸದ ಕಡೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಹೇಳಿದರು.
ಸ್ವಯಂಪ್ರೇರಣೆಯಿಂದ ಸೇವೆ ಸಲ್ಲಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದೇ ಎನ್‌ಎಸ್‌ಎಸ್ ಶಿಬಿರದ ಮೂಲ ಉದ್ದೇಶವಾಗಿದೆ. ಶ್ರಮದಾನದ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿ ಮೂಡುತ್ತದೆ. ಈ ಮೂಲಕ ಅವರನ್ನು ಜವಾಬ್ದಾರಿಯುತ ಹಾಗೂ ಉತ್ತಮ ನಾಗರಿಕರನ್ನಾಗಿ ರೂಪಿಸುವ ಕಾರ್ಯವನ್ನು ಎನ್‌ಎಸ್‌ಎಸ್ ಮಾಡುತ್ತಿದೆ ಎಂದು ಹೇಳಿದರು.
ಅತಿಥಿಗಳಾಗಿ ಉಪನ್ಯಾಸಕರಾದ ಪ್ರೊ.ಪಂಪಾಪತಿರೆಡ್ಡಿ, ಡಾ. ಜಯಶ್ರೀ ಬಿ. ಶೆಟ್ಟಿ, ಡಾ. ಬಿ.ಆರ್.ಕೇತನಕರ್, ಐಕ್ಯೂಎಸಿ ಸಂಚಾಲಕ ಡಾ.ಉಮೇಶ, ಡಾ.ಎಸ್.ಎಸ್. ನಾಯಕ್, ಎನ್‌ಎಸ್‌ಎಸ್ ಅಧಿಕಾರಿ ಡಾ.ಚಂದ್ರಶೇಖರ್ ಕೊಂಕಲ್, ಸಾಂಸ್ಕೃತಿಕ ಕಾರ್ಯದರ್ಶಿ ಪ್ರೊ. ನಾಗಪ್ಪ ಮಾನೆದಾರ ಸೇರಿದಂತೆ ಇತರರಿದ್ದರು. ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಬಸಲಿಂಗಮ್ಮ ಸ್ವಾಗತಿಸಿದರು. ಸಿದ್ದಲಿಂಗಮ್ಮ ವಂದಿಸಿದರು.