ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಬಾಲಕ-ಬಾಲಕಿಯರ ಕ್ರೀಡಾಕೂಟ ಆಯೋಜಿಸಲಾಗಿತ್ತು. 
ರಾಜ್ಯ

ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ

ಪ್ರಮುಖ ಮುಖ್ಯಾಂಶಗಳು

  • ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ
  • ಶ್ರೀ ಮಹದೇಶ್ವರ ಕ್ರೀಡಾಂಗಣ

ಕೊಳ್ಳೇಗಾಲ:

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿರುವುದರಿಂದ ಕ್ರೀಡೆಯಲ್ಲಿ ಭಾಗವಹಿಸುವರು ಆರೋಗ್ಯಕರ ಸ್ಪರ್ಧೆಗೆ ಒತ್ತು ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಸಲಹೆ ನೀಡಿದರು.

ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 14 ವರ್ಷದೊಳಗಿನ ಕಸಬಾ ಹೋಬಳಿಮಟ್ಟದ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಕ್ರೀಡೆಯಲ್ಲಿ ಸಾಧನೆ ಮಡುವುದರಿಂದ ಭವಿಷ್ಯದಲ್ಲಿ ಒಳ್ಳೆಯ ದಿನಗಳನ್ನು ಪಡೆಯಬಹುದು ಎಂದರು.
ಸರ್ಕಾರಿ ಆದರ್ಶ ಶಾಲೆ, ಕಜ್ಜಿಹುಂಡಿ, ಹೊಸಮಾಲಂಗಿ, ಸಿಲ್ಕಲ್‌ಪುರ ಸರ್ಕಾರಿ ಶಾಲೆ ಸಹಯೋಗದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಕಸಬಾ ವ್ಯಾಪ್ತಿಯ 45 ಶಾಲೆಯ ಕ್ರೀಡಾಪಟುಗಳು ಕಬ್ಬಡಿ, ಖೋಖೋ, ವಾಲಿಬಾಲ್, ಥ್ರೋಬಾಲ್ ಕ್ರೀಡೆಗಳಲ್ಲಿ ಪಾಲ್ಗೊಂಡಿದ್ದರು.
ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ್, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಸ್ಟೀವನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸವಿತಾ, ಆದರ್ಶ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್, ಮುಖ್ಯಶಿಕ್ಷಕಿ ಪ್ರಿಯದರ್ಶಿನಿ, ಚೌಡೇಶ್ವರಿ ಶಾಲೆಯ ಮುಖ್ಯಶಿಕ್ಷಕ ಮುರುಗೇಶ್, ಹೊಸಮಾಲಂಗಿ ಸರ್ಕಾರಿ ಶಾಲೆಯ ನಿಂಗರಾಜು, ಸಿಲ್ಕಲ್‌ಪುರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶಿವಮಾದು, ಕಜ್ಜಿಹುಂಡಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಚಂಪಕಮಾಲಾ, ಕ್ರೀಡಾ ದೈಹಿಕ ಶಿಕ್ಷಕ ಸುಂದರರಾಜ್ ಇದ್ದರು.