ಮಾಣಿಕನಗರದ ಶ್ರೀ ಮಾಣಿಕಪ್ರಭು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಶುಕ್ರವಾರ ಉದ್ಘಾಟಿಸಿದರು. ಡಾ.ಚಂದ್ರಕಾಂತ ಗಂಗಶೆಟ್ಟಿ, ಓಂಪ್ರಕಾಶ ದಡ್ಡೆ, ಶರಣಪ್ಪ ನಾಟೀಕರ್, ಮಲ್ಲಿನಾಥ ಚಿಂಚೋಳ್ಳಿ ಇತರರಿದ್ದರು.
- ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಅನಿಸಿಕೆ
- ಮಾಣಿಕನಗರದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ
ಹುಮನಾಬಾದ್: ವಿದ್ಯಾರ್ಥಿಗಳು ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಿದರೆ ದೈಹಿಕ ಮತ್ತು ಮಾನಸಿಕ ಶಕ್ತಿ ಸದೃಢವಾಗುವುದರ ಜತೆಗೆ ಮನಸ್ಸಿನ ಏಕಾಗ್ರತೆ ಹೆಚ್ಚಲಿದೆ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.
ಮಾಣಿಕನಗರದ ಶ್ರೀ ಮಾಣಿಕಪ್ರಭು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಶ್ರೀ ಮಾಣಿಕಪ್ರಭು ಪದವಿಪೂರ್ವ ಕಾಲೇಜು ಸಹಯೋಗದಡಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗೆ ವಿಶೇಷ ಮಹತ್ವವಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದರು.
ಪಿಯು ಡಿಡಿ ಡಾ.ಚಂದ್ರಕಾಂತ ಗಂಗಶೆಟ್ಟಿ, ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಓಂಪ್ರಕಾಶ ದಡ್ಡೆ, ಪದವಿಪೂರ್ವ ಕಾಲೇಜಿನ ಜಿಲ್ಲಾ ಕ್ರೀಡಾ ಸಂಯೋಜಕ ಶರಣಪ್ಪ ನಾಟೀಕರ್, ತಾಲೂಕು ಪದವಿಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷ ಮಲ್ಲಿನಾಥ ಚಿಂಚೋಳ್ಳಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ, ಪ್ರಾಚಾರ್ಯ ಆನಂದ, ಗ್ರಾಪಂ ಮಾಜಿ ಉಪಾಧ್ಯಕ್ಷ ಮಾಣಿಕ ನೀಮಾನೆ, ಪ್ರಮುಖರಾದ ಗಜೇಂದ್ರ ಕನಕಟಕರ್, ಗಿರೀಶ್ ತುಂಬಾ, ಮಾಣಿಕ ರೆಡ್ಡಿ, ರವಿ ಹೊಸಳ್ಳಿ ಇತರರಿದ್ದರು.