Sri's solution to the petrol diesel problem
ಎಂ.ಎನ್.ಕೋಟೆ : ಇರಾನ್ ದೇಶದಲ್ಲಿ ಯುದ್ಧ ನಡೆಯುತ್ತಿದ್ದರೂ ರಷ್ಯಾದಿಂದ ಭಾರತಕ್ಕೆ 30 ಲಕ್ಷ ಟನ್ ಪೆಂಟ್ರೋಲ್ ಡಿಸೇಲ್ ತರಿಸುವುದಕ್ಕೆ ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದ್ದರಿಂದ ಕರ್ನಾಟಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಗುಬ್ಬಿ ತಾಲೂಕಿನ ಹರದಗೆರೆ ಗೊಲ್ಲರಹಟ್ಟಿಗಳಲ್ಲಿ ಗುರುವಾರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಸಿಲಿಂಡರ್ಗೆ ಸ್ವಲ್ಪ ಬೇಡಿಕೆ ಇದೆ. ಅದು ಸರಿಯಾಗುತ್ತದೆ. ಪೆಂಟ್ರೋಲ್ ಡಿಸೇಲ್ ಸಮಸ್ಯೆಯೂ ಶ್ರೀ ಪರಿಹಾರವಾಗಲಿದೆ ಎಂದು ತಿಳಿಸಿದರು.
ಎಸ್ಎಸ್ಎಲ್ಸಿ ವಿಧ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಬಸ್ ವ್ಯವಸ್ಥೆ ಮಾಡಲಾಗಿದೆ. ಮುರಾರ್ಜಿ ವಸತಿಶಾಲೆಗಳಿಂದ ಬರುವ ವಿದ್ಯಾರ್ಥಿಗಳಿಗೂ ಬಸ್ ವ್ಯವಸ್ಥೆ ಮಾಡಲಾಗಿದೆ. ದೂರದ ಊರುಗಳಿಂದ ಬರುವ ವಿಧ್ಯಾರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿದ್ದು, ಈ ಭಾರಿ ಗುಬ್ಬಿಯಲ್ಲಿ ಉತ್ತಮ ಫಲಿತಾಂಶ ಬರುವ ನಿರೀೆ ಇದೆ ಎಂದರು.
ತಾಲೂಕಿನಲ್ಲಿ ಬೇಸಿಗೆ ಆರಂಭವಾಗಿರುವುದರಿಂದ ಹಳ್ಳಿಗಳಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳಬೇಕು ಎಂದು ಆಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು