ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 
ರಾಜ್ಯ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ: ಫಲಿತಾಂಶ, ಮಾರ್ಕ್ಸ್ ಕಾರ್ಡ್ ಡೌನ್‌ಲೋಡ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿ
  • ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್, ಕರ್ನಾಟಕ ಒನ್ ಮೊಬೈಲ್ ಆೃಪ್ ಮೂಲಕವೂ ಪಡೆಯಬಹುದು.
  • ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ನಲ್ಲಿಯೂ ಫಲಿತಾಂಶ ಪ್ರಕಟವಾದ ಕೂಡಲೇ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಬೆಂಗಳೂರು: ಮಾ.18ರಿಂದ ಏ.2ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ 8.65 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಹಾಜರಾಗಿದ್ದರು. ಈ ಎಲ್ಲ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಗುರುವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಫಲಿತಾಂಶದ ಲಿಂಕ್

ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್ https://karresults.nic.in ಇಲ್ಲಿ ನೋಡಬಹುದು.
ಕರ್ನಾಟಕ ಒನ್ ಮೊಬೈಲ್ ಆೃಪ್ ಮೂಲಕವೂ ಪಡೆಯಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯ

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ನಲ್ಲಿಯೂ ಫಲಿತಾಂಶ ಪ್ರಕಟವಾದ ಕೂಡಲೇ ಡೌನ್‌ಲೋಡ್ ಮಾಡಿಕೊಳ್ಳಬಹುದು. ಡಿಜಿಲಾಕರ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು https://www.digilocker.gov.in
ಲಿಂಕ್ ಬಳಸಬಹುದು. ಹಾಗೆಯೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೇಗೆ ಡಿಜಿಲಾಕರ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂಬುದರ ವೀಡಿಯೋ ಲಿಂಕ್ ಅನ್ನು ಬಳಸಿ hhtp://tinyuri.com/mw84wmh9
ತಿಳಿದುಕೊಳ್ಳಬಹದು.