ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 
ರಾಜ್ಯ

ಎಸ್ಸೆಸ್ಸೆಲ್ಸಿ ಟಾಪರ್: ಲ್ಯಾಪ್‌ಟಾಪ್ ಬದಲು ನಗದು ಬಹುಮಾನ ಘೋಷಣೆ

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಶಾಲೆಯಲ್ಲಿ ಓದಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಗರಿಷ್ಠ ಅಂಕ ಪಡೆದ ತಲಾ 3 ಮಂದಿಗೆ ಲ್ಯಾಪ್ ಟಾಪ್ ಬದಲು 50 ಸಾವಿರ ರೂ ನಗದು
  • ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಣೆ
ಬೆಂಗಳೂರು:: 2024-25ರ ಸಾಲಿನಲ್ಲಿ ಎಸ್ಎಸ್ಎಲ್ ಸಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಗರಿಷ್ಠ ಅಂಕ ಪಡೆದ ತಲಾ 3 ಮಂದಿಗೆ ಲ್ಯಾಪ್ ಟಾಪ್ ಬದಲು 50 ಸಾವಿರ ರೂ ನಗದು ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ತಿಳಿಸಿದೆ.
ವಿದ್ಯಾರ್ಥಿಗಳಿಗೆ "ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮ" ಕ್ರಿಯಾ ಯೋಜನೆಯ ಪ್ರೋತ್ಸಾಹಕ ಕಾರ್ಯಕ್ರಮದಡಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಗರಿಷ್ಠ ಅಂಕ ಪಡೆದ ಮೂವರು ವಿದ್ಯಾರ್ಥಿಗಳು ಮತ್ತು ಪ್ರತಿ ತಾಲೂಕಿನಲ್ಲಿ ಗರಿಷ್ಠ ಅಂಕ ಪಡೆದ ಮೂವರು ವಿದ್ಯಾರ್ಥಿಗಳಂತೆ ಒಟ್ಟು 758 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು 3.25 ಕೋಟಿ ಮೀಸಲಿರಿಸಿತ್ತು.
ಆದರೆ ಇದೀಗ ಲ್ಯಾಪ್ ಟಾಪ್ ನೀಡುವ ಬದಲು ಒಟ್ಟು 758 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವಾಗಿ ಪ್ರತಿ ವಿದ್ಯಾರ್ಥಿಗೆ ತಲಾ 50,000 ರೂಗಳ ಮೊತ್ತವನ್ನು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ಅಧಾರ್ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವಿತರಿಸಲು ಮತ್ತು ಕೊರತೆಯಾಗುವ ಅನುದಾನವನ್ನು ಮಂಡಲಿಯ ಸ್ವಂತ ಮೂಲಗಳಿಂದ ಭರಿಸಲು ಸೂಚಿಸಲಾಗಿದೆ.
ಸರ್ಕಾರಿ ಶಾಲೆಯಲ್ಲಿ ಓದಿದ ಎಸ್ ಎಸ್ ಎಲ್ ಸಿ ಟಾಪರ್ ಗಳಿಗೆ ಲ್ಯಾಪ್ ಟಾಪ್ ವಿತರಿಸುವ ಕಾರ್ಯಕ್ರಮಕ್ಕೆ ಕಳೆದ ಮಕ್ಕಳ ದಿನಾಚರಣೆ ದಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದರು.