ಕಲಬುರಗಿ ಜಿಲ್ಲೆಯ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನ, ತ್ತರಗಿ ಭಾಗ್ಯವಂತಿ ದೇವಸ್ಥಾನ ಅಭಿವೃದ್ಧಿ ಕುರಿತು ಬೆಂಗಳೂರಿನಲ್ಲಿ ಅಫಜಲಪುರ ಶಾಸಕ ಎಂ.ವೈ.ಪಾಟೀಲ್​, ಅಧಿಕಾರಿಗಳ ಜತೆಗೆ ಸಚಿವ ಪ್ರಿಯಾಂಕ್​ ರ್ಖಗೆ ಸಭೆ ನಡೆಸಿದರು. 
ರಾಜ್ಯ

ಗಾಣಗಾಪುರ, ಘತ್ತರಗಿ ದೇವಸ್ಥಾನ ಅಭಿವೃದ್ದಿಗೆ ಕ್ರಮ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಂ.ವೈ.ಪಾಟೀಲ್​, ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್​ ಸಭೆ
ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲ್​ಪುರ ತಾಲೂಕಿನ ಪ್ರಸಿದ್ಧ ಕ್ಷೇತ್ರ ಗಾಣಗಾಪುರದ ದತ್ತಾತ್ರೇಯ ದೇವಾಲಯ ಹಾಗೂ ತ್ತರಗಿಯ ಭಾಗ್ಯವಂತಿ ದೇವಾಲಯ ಅಭಿವೃದ್ದಿ ಪಡಿಸಲು ರೂಪರೇಷೆ ಸಿದ್ದಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ ರಾಜ್​, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ರ್ಖಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಫಜಲಪುರ ಶಾಸಕ ಎಂ.ವೈ.ಪಾಟೀಲ್​, ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ನಡೆದ ಸಭೆಯ ನಂತರ ಮಾಹಿತಿ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್​, ಸುಮಾರು 500 ವರ್ಷಗಳ ಪರಂಪರೆ ಹೊಂದಿರುವ ಶ್ರೀೇತ್ರ ಗಾಣಗಾಪುರದ ದತ್ತಾತ್ರೇಯ ದೇವಾಲಯ ಹಾಗೂ ತ್ತರಗಿಯ ಭಾಗ್ಯವಂತಿ ದೇವಾಲಯಕ್ಕೆ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ.
ಭೀಮಾ ಮತ್ತು ಅಮರ್ಜಾ ನದಿಯ ಸಂಗಮವು ಇಲ್ಲಿನ ಧಾರ್ಮಿಕ ಶ್ರೇಷ್ಠತೆ ಇನ್ನಷ್ಟು ಹೆಚ್ಚಿಸಿದೆ. ಮುಜರಾಯಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ರಾಜ್​ ಇಲಾಖೆಗಳ ಸಹಯೋಗದಲ್ಲಿ ಈ ಎರಡೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕಾರ್ಯಯೋಜನೆ ರೂಪಿಸಲಾಗುತ್ತಿದೆ. ತರು ರೂಪಿಸಿರುವ ನೀಲಿನಕ್ಷೆ ಅವಲೋಕಿಸಲಾಗಿದೆ ಎಂದು ಎಂದು ಸಚಿವರು ವಿವರಿಸಿದ್ದಾರೆ.