ಬಾಗಲಕೋಟೆ ಅಪರ ಜಿಲ್ಲಾಽಕಾರಿಗಳ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಾದೇಶಿಕ ಮತ್ತು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳಿಗೆ ಸಂದರ್ಶಕ ಸಂಖ್ಯೆ ಹೆಚ್ಚಿಸುವ ಕುರಿತು ಜರುಗಿದ ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಮಾತನಾಡಿದರು. ತೋಟಗಾರಿಕೆ ವಿವಿಯ ರಜಿಸ್ಟರ ಡಾ.ಜನಾರ್ಧನ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ.ಸಿ.ಮನ್ನಿಕೇರಿ ಇದ್ದರು.
ಬಾಗಲಕೋಟೆ: ಪ್ರಾದೇಶಿಕ ಮತ್ತು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭೇಟಿ ನೀಡುವಂತೆ ಮಾಡಲು ವಿವಿಧ ಕಾರ್ಯಕ್ರಮ ರೂಪಿಸುವಂತೆ ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಅಧಿಕಾರಿಗಳಿಗ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಾದೇಶಿಕ ಮತ್ತು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳಿಗೆ ಸಂದರ್ಶಕ ಸಂಖ್ಯೆ ಹೆಚ್ಚಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಆಕರ್ಷಿಸಲು ವಿಜ್ಞಾನ ಪ್ರದರ್ಶನಗಳು, ಆಕಾಶ ವೀಕ್ಷಣೆ ಕಾರ್ಯಕ್ರಮಗಳು, ವಿಜ್ಞಾನ ಮಾದರಿ ಪ್ರದರ್ಶನ, ವಿಜ್ಞಾನ ಮೇಳ ಹಾಗೂ ಖಗೋಳಶಾಸ್ತç ಕುರಿತು ಕಾರ್ಯಕ್ರಮಗಳನ್ನು ಆಯೋಜಿಸಲು ತಿಳಿಸಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೆ ವಿಜ್ಞಾನ ಕೇಂದ್ರಗಳ ಮಹತ್ವ ತಿಳಿಸುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ತಾರಾಲಯಗಳಲ್ಲಿ ಹೊಸ ತಂತ್ರಜ್ಞಾನ ಆಧಾರಿತ ಪ್ರದರ್ಶನ, ಡಿಜಿಟಲ್ ಆಕಾಶ ವೀಕ್ಷಣೆ, ಮಕ್ಕಳಿಗೆ ಅನುಕೂಲಕರ ವಿಜ್ಞಾನ ಚಟುವಟಿಕೆಗಳನ್ನು ಪರಿಚಯಿಸುವ ಮೂಲಕ ಸಂದರ್ಶಕರನ್ನು ಸೆಳೆಯುವ ಪ್ರಯತ್ನ ಮಾಡಬೇಕು. ವಿಜ್ಞಾನ ಸ್ಪರ್ಧೆಗಳು, ಕುಟುಂಬ ಸಮೇತ ಭೇಟಿ ನೀಡಲು ಅನುಕೂಲಕರ ಚಟುವಟಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಕಾರ್ಯ ಕೈಗೊಳ್ಳಲು ತಿಳಿಸಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಐಟಿಐ, ಪಾಲಿಟೆಕ್ನಿಕ್, ಪದವಿ ಪೂರ್ವ, ಪದವಿ ಕಾಲೇಜುಗಳು, ತಾಂತ್ರಿಕ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಸಂಬAಧಪಟ್ಟ ಇತರೆ ಇಲಾಖೆಗಳ ಸಮನ್ವಯ ಸಭೆ ಕರೆದು ಎಲ್ಲ ವಿದ್ಯಾರ್ಥಿಗಳು ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.
ಸಭೆಯಲ್ಲಿ ತೋಟಗಾರಿಕೆ ವಿವಿಯ ರಜಿಸ್ಟರ ಡಾ.ಜನಾರ್ಧನ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ.ಸಿ.ಮನ್ನಿಕೇರಿ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಪರಶುರಾಮ ಲಮಾಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.