ಬೈಲಹೊಂಗಲದಲ್ಲಿ ಹಮ್ಮಿಕೊಂಡಿದ್ದ ಸಂಟನಾ ಸಭೆಯಲ್ಲಿ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಸುಭಾಸ ತುರಮರಿ, ಈರಣ್ಣ ಅಂಗಡಿ, ಮಹಾಂತೇಶ ಚಿನ್ನಪ್ಪಗೌಡ್ರ ಇತರರಿದ್ದರು. 
ರಾಜ್ಯ

ಗ್ರಾಮ ಮಟ್ಟದಿಂದ ಪಕ್ಷ ಗಟ್ಟಿಗೊಳಿಸಿ

ಬೈಲಹೊಂಗಲ: ಯುವ ಕಾರ್ಯಕರ್ತರೇ ಬಿಜೆಪಿ ಶಕ್ತಿಯಾಗಿದ್ದು, ಗ್ರಾಮ ಮಟ್ಟದಿಂದ ಪಕ್ಷ ಸಂಟಿಸಿ ಮತ್ತಷ್ಟು ಸದೃಢಗೊಳಿಸಲು ಪ್ರತಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು. ಬಿಜೆಪಿ ಯುವ ಮೋರ್ಚಾ ಬೆಲಹೊಂಗಲ ಮಂಡಲ ವತಿಯಿಂದ ಆಯೋಜಿಸಿದ್ದ ಸಂಟನಾ ಸಭೆಯಲ್ಲಿ ಅವರು ಮಾತನಾಡಿ, ಮುಂಬರುವ ರಾಜಕೀಯ ಬೆಳವಣಿಗೆಗಳು, ಪದ ಕಾರ್ಯಕ್ರಮಗಳು ಹಾಗೂ ಚುನಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡು ಯುವ ಮೋರ್ಚಾ ಕಾರ್ಯಕರ್ತರು ಜನಸಾಮಾನ್ಯರೊಂದಿಗೆ ಸಂಪರ್ಕದಲ್ಲಿ ಇರಬೇಕು. ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿಯನ್ನು ಯುವ ಮೋರ್ಚಾ ಸಮರ್ಥವಾಗಿ ನಿರ್ವಹಿಸಬೇಕು ಎಂದರು. ಮುಂಬರುವ ಸಂಟನಾ ಕಾರ್ಯಗಳ ರೂಪುರೇಷೆ, ಸದಸ್ಯತ್ವ ಅಭಿಯಾನ, ಬೂತ್​ ಸಮಿತಿಗಳ ಬಲವರ್ಧನೆ ಹಾಗೂ ಪದ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ಕುರಿತು ಚರ್ಚೆ ನಡೆಯಿತು. ಸಭೆಯಲ್ಲಿ ರಾಜ್ಯ ಯುವ ಮೋರ್ಚಾ ಉಪಾಧ್ಯ ಈರಣ್ಣ ಅಂಗಡಿ, ಬಿಜೆಪಿ ಮಂಡಲ ಅಧ್ಯ ಸುಭಾಸ ತುರಮರಿ ಮಾತನಾಡಿ, ಯುವ ಮೋರ್ಚಾ ಸಂಟನೆಗೆ ಚೆತನ್ಯ ತುಂಬಲು ಪದಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಗ್ರಾಮಾಂತರ ಜಿಲ್ಲಾ ಯುವ ಮೋರ್ಚಾ ಅಧ್ಯ ಮಹಾಂತೇಶ ಚಿನ್ನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ, ತಾಲೂಕು ಯುವ ಮೋರ್ಚಾ ಅಧ್ಯ ಅರುಣ ಬೋಳೆತ್ತಿನ, ಪ್ರ.ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ವಿಶಾಲ ಬೋಗೂರ ಸೇರಿದಂತೆ ಮಂಡಲ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿದ್ದರು.