ನಿಷೇಧಿತ ಪ್ಲಾಸ್ಟಿಕ್ ಬಳಸಿದರೆ ನಿರ್ಧಾಣ್ಯ ಕ್ರಮ plastic ban
- ವೇಮಗಲ್&ಕುರುಗಲ್ ಪಪಂ ಮುಖ್ಯಾಧಿಕಾರಿ ವೆಂಕಟೇಶ್ ಎಚ್ಚರಿಕೆ
- ಅಂಗಡಿ&ಮುಂಗಟ್ಟುಗಳ ಮೇಲೆ ದಾಳಿ
ವೇಮಗಲ್: ವೇಮಗಲ್&ಕುರುಗಲ್ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಪಟ್ಟಣದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಮಿಂಚಿನ ದಾಳಿ ನಡೆಸಿ, ವಿವಿಧ ಅಂಗಡಿ ಮುಂಗಟ್ಟುಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 50 ಕೆಜಿಗೂ ಹೆಚ್ಚು ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು.plastic ban
ಪಟ್ಟಣದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೈಗೊಂಡ ಈ ಕಟ್ಟುನಿಟ್ಟಿನ ಕ್ರಮವು ಪ್ಲಾಸ್ಟಿಕ್ ಮಾರಾಟಗಾರರು ಮತ್ತು ಬಳಕೆದಾರರಲ್ಲಿ ಜಾಗೃತಿ ಉಂಟು ಮಾಡಿದ್ದಲ್ಲದೇ, ಕೆಲವರಿಗೆ ದಂಡದ ಆತಂಕ ಎದುರಾಯಿತು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ.ಎಸ್. ವೆಂಕಟೇಶ್ ಮಾತನಾಡಿ, ಪ್ಲಾಸ್ಟಿಕ್ಮುಕ್ತ ಪಟ್ಟಣವನ್ನಾಗಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಯಾವುದೇ ನಿರ್ಧಾಣ್ಯವಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರಸ್ತುತ ಮೊದಲ ಹಂತದಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ಹಂತದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲಾಗುವುದು ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯ ಸಿ.ಎಸ್. ವೆಂಕಟೇಶ್ ಮಾತನಾಡಿ, ಪ್ಲಾಸ್ಟಿಕ್ ಬಳಕೆಯು ಕೇವಲ ಪರಿಸರ ಮಾಲಿನ್ಯಕ್ಕೆ ಸೀಮಿತವಾಗಿಲ್ಲ, ಅದು ಒಟ್ಟಾರೆ ಪಟ್ಟಣದ ಸೌಂದರ್ಯವನ್ನು ಹಾಳುಗೆಡವುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ಪ್ಲಾಸ್ಟಿಕ್ನಿಂದಾಗಿ ಚರಂಡಿಗಳು ಬ್ಲಾಕ್ ಆಗಿ ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರತಿ ನಾಗರಿಕನೂ ಪ್ಲಾಸ್ಟಿಕ್ ಬದಲಿಗೆ ಬಟ್ಟೆ ಚೀಲಗಳನ್ನು ಬಳಸುವ ಮೂಲಕ ಪರಿಸರಸ್ನೇಹಿ ಜೀವನಶೈಲಿ ರೂಢಿಸಿಕೊಳ್ಳಬೇಕು ಮತ್ತು ಪಟ್ಟಣ ಪಂಚಾಯಿತಿಯ ಈ ಸ್ವಚ್ಛತಾ ಅಭಿಯಾನಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.