ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ಅಧಿಕಾರಿ ಎಸ್. ಎಸ್. ಮಠಪತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮರ ಪಟೇಲ್, ಡಿ.ಯು.ಡಿ.ಸಿ ಜಿಲ್ಲಾ ಯೋಜನಾ ನಿರ್ದೇಶಕ ಮೂನಾವರ್ ದೌಲಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ವಿವಿಧ ಇಲಾಖೆ ಮತ್ತು ನಿಗಮಗಳ ಅಧಿಕಾರಿಗಳು ಇದ್ದರು. 
ರಾಜ್ಯ

ಜಿಲ್ಲೆಯಲ್ಲಿ ಮ್ಯಾನ್ಯುಲ್ ಸ್ಕ್ಯಾವೆಂಜರ್ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ

ಕಲಬುರಗಿ: ಜಿಲ್ಲೆಯಲ್ಲಿ ಮ್ಯಾನ್ಯುಲ್ ಸ್ಕ್ಯಾವೆಂಜರ್ ಕಂಡು ಬಂದಲ್ಲಿ ಅಥವಾ ಅದಕ್ಕೆ ಸಂಬಂಧಿಸಿದಂತೆ ಯಾವುದೇ ಒಂದು ದೂರು ದಾಖಲಾದರೂ ಸಹ ಅಲ್ಲಿನ ಸ್ಥಳೀಯ ಸಂಸ್ಥೆಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಸಮಸ್ಯೆಗಳು ಈಗಾಗಲೇ ಆರಂಭವಾಗಿದ್ದು, ಯಾರೂ ಸಹ ಕೈಯಿಂದ ಕ್ಲೀನ್ ಮಾಡಬಾರದು ಹಾಗೂ ಮಾಡಿಸಬಾರದು, ಈ ಕುರಿತು ಯಾವ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಮೆಷಿನ್ ಬಂದು ಕ್ಲೀನ್ ಮಾಡುತ್ತದೆ ಎಂಬ ಜಾಗೃತಿಯನ್ನು ಜನರಲ್ಲಿ ಮೂಡಿಸಬೇಕು ಎಂದರು.
ಮ್ಯಾನ್ಯುಲ್ ಸ್ಕ್ಯಾವೆಂಜರ್ ಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಹಾಗೂ ಸ್ಥಳೀಯ ನಗರಸಭೆ ಆಯುಕ್ತರು ಸೇರಿ ಸಭೆ ನಡೆಸಿ ಅವರ ಕಲ್ಯಾಣ ಕಾರ್ಯಕ್ರಮಗಳ ಯೋಜನೆಯಡಿ ಸರ್ಕಾರ ಜಾರಿಗೆ ತಂದಿರುವ ಸೌವಲತ್ತುಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು ಸಹ ಈವರೆಗೆ ಯಾವುದೇ ಕ್ರಮ ಆಗಿಲ್ಲವೆಂದು ಅಧಿಕಾರಿಗಳ ಕೆಲಸದ ಕುರಿತು ಅಸಮಾದಾನ ವ್ಯಕ್ತಪಡಿಸಿ, ಇದೇ ರೀತಿ ಮುಂದುವರೆದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.