ಬಸವನಬಾಗೇವಾಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ವಿ. ಗುಂಡಪ್ಪನವರ ಭಾವಚಿತ್ರಕ್ಕೆ ಪುಷ್ಪರ್ಪಾಣೆ ಸಲ್ಲಿಸಲಾಯಿತು. ಪ್ರಕಾಶ ಬೆಣ್ಣೂರ, ಬಸವರಾಜ ಉಳ್ಳಾಗಡ್ಡಿ, ರಾಜು ಗಣಾಚಾರಿ, ದಯಾನಂದ ಬಾಗೇವಾಡಿ, ನಾಗೇಶ ನಾಗೂರ, ಶಿವಾಜಿ ಮೋರೆ, ಗುರುರಾಜ ಕನ್ನೂರ, ಶಿವಾನಂದ ನಾಗರಾಳ ಇತರರಿದ್ದರು.
- ಡಿ.ವಿ. ಗುಂಡಪ್ಪನವರ ಭಾವಚಿತ್ರಕ್ಕೆ ಪುಷ್ಪರ್ಪಾಣೆ
- ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಬಸವನಬಾಗೇವಾಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ದಿ. ಡಿ.ವಿ. ಗುಂಡಪ್ಪನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಕಾಶ ಬೆಣ್ಣೂರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಸತ್ಯ, ನಿಷ್ಪಕ್ಷಪಾತ, ಜವಾಬ್ದಾರಿಯುತವಾಗಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು. ಸಮಾಜದ ಧ್ವನಿಯಾಗಿ ಕಾರ್ಯನಿರ್ವಹಿಸುವ ಪತ್ರಕರ್ತರು ಸಾರ್ವಜನಿಕ ಹಿತಾಸಕ್ತಿಗಾಗಿ ಪತ್ರಕರ್ತರು ನಿರಂತರವಾಗಿ ಶ್ರಮಿಸಬೇಕು ಎಂದರು.
ಕಾನಿಪ ತಾಲೂಕು ಘಟಕದ ಅಧ್ಯಕ್ಷ ರಾಜು ಗಣಾಚಾರಿ, ಪ್ರಧಾನ ಕಾರ್ಯದರ್ಶಿ ದಯಾನಂದ ಬಾಗೇವಾಡಿ, ಖಜಾಂಚಿ ನಾಗೇಶ ನಾಗೂರ, ಕಾನಿಪ ಸಂಘದ ಸದಸ್ಯರಾದ ಯಾಸೀನ್ ಅತ್ತಾರ, ಗುರುರಾಜ ಕನ್ನೂರ, ಶಿವಾನಂದ ನಾಗರಾಳ, ಮಲ್ಲಿಕಾರ್ಜುನ ಬುರ್ಲಿ, ಶಿವಾಜಿ ಮೋರೆ ಇತರರಿದ್ದರು.